ದೇವೇಗೌಡ ಕುಟುಂಬದ ವಿರುದ್ಧದ ರಾಜಕೀಯ ನಮಗೆ ಹೊಸದೇನಲ್ಲ: ಹಾಸನದಲ್ಲಿ ಡಿ ಕೆ ಶಿವಕುಮಾರ್

Date:

“ನಮಗೆ ದೇವೇಗೌಡ ಕುಟುಂಬದ ವಿರುದ್ಧದ ರಾಜಕೀಯ ಹೊಸದೇನಲ್ಲ. ಅವರ ಪಕ್ಷ, ಅಳಿಯ ಶಕ್ತಿಶಾಲಿಯಾಗಿದ್ದಿದ್ದರೆ ಅವರ ಪಕ್ಷದಿಂದ ನಿಲ್ಲಿಸುತ್ತಿದ್ದರು. ಜೆಡಿಎಸ್ ಶಕ್ತಿ ಕಳೆದುಕೊಂಡಿದೆ. ಹೀಗಾಗಿ ಈ ರಾಜ್ಯದಲ್ಲಿ ಹೊಂದಾಣಿಕೆ ನಡೆಯುತ್ತಿದೆ. ಕುಮಾರಸ್ವಾಮಿ ಅವರು ತಮ್ಮನ್ನು ಯಾರು ಅಧಿಕಾರದಿಂದ ಇಳಿಸಿದ್ದರೋ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭ ನಡೆದ ಬೃಹತ್ ಮೆರವಣಿಗೆ ವೇಳೆ ಮಾತನಾಡಿದ ಅವರು, “ದೇವೇಗೌಡರು ಹಾಸನದಲ್ಲಿ ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಮಂಡ್ಯದಲ್ಲಿ ಮಗನನ್ನು ನಿಲ್ಲಿಸಿದ್ದಾರೆ. ಅಳಿಯನನ್ನು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಒಂದೇ ಕುಟುಂಬದಿಂದ ಮೂವರು ನಿಂತಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಬೇರೆ ಯಾರೂ ಇರಲಿಲ್ಲವಾ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಸ್ವಂತ ಅಳಿಯನನ್ನು ನಿಮ್ಮ ಪಾರ್ಟಿಯಿಂದ ನಿಲ್ಲಿಸಲು ಆಗಲಿಲ್ಲ ಎಂದರೆ ನಿಮ್ಮ ಪಾರ್ಟಿಗೆ ಶಕ್ತಿ ಎಲ್ಲಿದೆ? ಜೆಡಿಎಸ್‌ನಿಂದ ಇಬ್ಬರು, ಬಿಜೆಪಿಯಿಂದ ಒಬ್ಬರು ಸೇರಿ ಮೂರು ಜನ ನಿಂತಿದ್ದಾರೆ. ಈ ಮೂರು ಜನರಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿಕೊಳ್ಳುತ್ತೇನೆ. ಇವರು ನನ್ನನ್ನೇ ಬಿಟ್ಟಿಲ್ಲ, ಇನ್ನೂ ನಿಮ್ಮನ್ನು ಬಿಡುತ್ತಾರಾ? ಎಲೆಕ್ಷನ್ ಕಳೆದ ಮೇಲೆ ನಿಮ್ಮನ್ನು ಬಿಡುವುದಿಲ್ಲ. ಪ್ರೀತಂ ಗೌಡ ಅವರನ್ನು ರಾಜಕೀಯವಾಗಿ ಸಮಾಧಿ ಮಾಡಿಬಿಡುತ್ತಾರೆ. ಸಿಮೆಂಟ್ ಮಂಜು, ಸುರೇಶ್ ನಿಮ್ಮನ್ನು ಬಿಡಲ್ಲ. ಬೆಳ್ಳಿಪ್ರಕಾಶ್ ಎಲೆಕ್ಷನ್ ಮುಗಿದ ಮೇಲೆ ಬೆಳ್ಳಿನೂ ಇರಲ್ಲ ಚಿನ್ನಾನೂ ಇರಲ್ಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ನಾವು ನಿಮ್ಮ ಪಲ್ಲಕ್ಕಿಯನ್ನೂ ಹೊರುತ್ತೇವೆ, ನಿಮ್ಮ ಹೆಣವನ್ನೂ ಹೊರುತ್ತೇವೆ. ಇಡೀ ದೇಶ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಚುನಾವಣೆ ನೋಡುತ್ತಿದೆ. 2013ರಲ್ಲಿ ನಡೆದ ಉಪಮುನಾವಣೆಯಲ್ಲಿ ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಾಗ, ಬಿಜೆಪಿ-ಜನತಾದಳವರು ಒಂದಾಗಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದರು. ಆ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಒಂದು ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು” ಎಂದು ಡಿಸಿಎಂ ನೆನಪಿಸಿದರು.

ನಾನು, ಜಿ.ಟಿ.ದೇವೇಗೌಡ, ಶಿವಲಿಂಗೇಗೌಡ ಮೈತ್ರಿ ಸರ್ಕಾರ ಉಳಿಸಲು, ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಸ್ಥಾನ ಉಳಿಸಲು ಬಾಂಬೆಗೆ ಹೋಗಿದ್ದೆವು. ಈಗ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರವನ್ನು ನಾವು ಬೀಳಿಸಿದ್ದೇವೆ ಎಂದು ಹೇಳುತ್ತಾ ಇದ್ದಾರೆ. ಈ ಹಾಸನಾಂಬೆ ಮೇಲೆ ಸತ್ಯ ಮಾಡಿ ನಾವು ಮೋಸ ಮಾಡಿದ್ದೇವೆಯೇ ಇಲ್ಲವೇ ಎಂದು ಕುಮಾರಸ್ವಾಮಿ ಅವರು ಹೇಳಲಿ” ಎಂದು ಡಿ ಕೆ ಶಿವಕುಮಾರ್ ಸವಾಲೆಸೆದಿದ್ದಾರೆ.

“ನಾನು ಹಾಸನಾಂಬೆ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ. ನಾವು ತಾಯಿಗೆ ದ್ರೋಹ ಮಾಡುವ ಮಕ್ಕಳಲ್ಲ, ಹೋರಾಟ ಮಾಡುವ ಮಕ್ಕಳು. ತಾಯಿ ಹಾಸನಾಂಬೆ ಆಶೀರ್ವಾದ ಶ್ರೇಯಸ್‌ ಪಟೇಲ್ ಮೇಲೆ ಇದೆ. ಒಂದು ಲಕ್ಷ ಮತಗಳ ಅಂತರದಿಂದ ಶ್ರೇಯಸ್ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...