ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು : ಶಾಸಕ ಸಿ ಎನ್ ಅಶ್ವತ್ಥ್‌ ನಾರಾಯಣ

Date:

ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ಬಿಜೆಪಿ ಶಾಸಕ ಡಾ. ಸಿ ಎನ್ ಅಶ್ವತ್ಥ್‌ ನಾರಾಯಣ ಅವರು ತಿಳಿಸಿದರು.

ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಕೋರಿದ್ದಾಗಿ ತಿಳಿಸಿದರು. ಭ್ರಷ್ಟಾಚಾರ ತಡೆಗಾಗಿ ಈ ದೂರು ನೀಡಿದ್ದೇವೆ. ಯುದ್ಧ ಪ್ರಾರಂಭವಾಗಿದೆ ಎಂದು ಹೇಳಿದರು.

ಸಚಿವ ಕೆ ಜೆ ಜಾರ್ಜ್ ಅವರು 9 ಸುಳ್ಳು ಹೇಳಿದ್ದಾರೆ. ಇದನ್ನು ಪತ್ರಿಕಾಗೋಷ್ಠಿಯಲ್ಲೂ ತಿಳಿಸಿದ್ದೇವೆ. ಬೇನಾಮಿ, ದುರ್ಬಳಕೆ ನಡೆದಿರುವುದು, ಗ್ರಾಹಕರಿಗೆ ಕಡ್ಡಾಯ ಮಾಡಲು ಅವಕಾಶ ಇಲ್ಲದಿದ್ದರೂ ಮಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಇಂಧನ ಸಚಿವ ಕೆ ಜೆ ಜಾರ್ಜ್, ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ಎಂ ಡಿ ಮಹಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್, ಬಾಲಾಜಿ ಮತ್ತಿತರರ ವಿರುದ್ಧ ದೂರು ಕೊಟ್ಟಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿ ರಾಜಶ್ರೀ ಎಂಬ ಪ್ಲಂಬರ್ ತಯಾರಿಕೆ ಮಾಡುವ ವ್ಯಕ್ತಿಗೆ ಗುತ್ತಿಗೆ ಕೊಡಲು ಎಲ್ಲ ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಸ್ಮಾರ್ಟ್ ಮೀಟರನ್ನು ಗ್ರಾಹಕರಿಗೆ ಕಡ್ಡಾಯ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಆದರೂ ಕಡ್ಡಾಯ ಮಾಡಿದ್ದಾರೆ. ಇದಿಷ್ಟೇ ಅಲ್ಲ, ಕಪ್ಪು ಪಟ್ಟಿ ಆದ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...