ನಾವು ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ವಂಚಿಸಲ್ಲ; ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

“ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡು, ಆರು ಕಿಲೋಮೀಟರ್ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.

“ಸಂಸದ ತೇಜಸ್ವಿ ಸೂರ್ಯ ಸಂಸದರಾಗಿ ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಮೋದಿ ಮುಖ ತೋರಿಸಿ ಓಟು ಕೇಳುವ ದುರ್ಗತಿ ಬಿಜೆಪಿಗೆ ಬಂದಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವ ಮುಖ ಇಲ್ಲ. ಏಕೆಂದರೆ ಇವರು ಅಭಿವೃದ್ಧಿ ಕಾರ್ಯಗಳನ್ನೇ ಮಾಡಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರಿಗೆ ಕೊಟ್ಟ ಒಂದು ಮಾತನ್ನೂ ಉಳಿಸಿಕೊಂಡಿಲ್ಲ. ಕಪ್ಪುಹಣ ವಾಪಸ್ ತರಲಿಲ್ಲ. ಭಾರತೀಯರ ಖಾತೆಗೆ 15 ಲಕ್ಷ ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ. ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ” ಎಂದು ಪ್ರಶ್ನಿಸಿದರು.‌

ಇದನ್ನು ಓದಿದ್ದೀರಾ? ‘ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವರ ಪತ್ನಿ ದೂರು

“ಸೌಮ್ಯರೆಡ್ಡಿ ಗೆದ್ದರೆ ನಾನು ಗೆದ್ದಂತೆ. ನಿಮ್ಮ ಹೃದಯದ ಮಾತು ಕೇಳಿ ಮತ ಹಾಕಿ. ಬರೀ ಭಾವನಾತ್ಮಕವಾಗಿ ಕೆರಳಿ ಮತ ಹಾಕಿದ್ದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ, ನಿಮಗೆ ಸಿಕ್ಕಿದ್ದೇನು” ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೌಮ್ಯರೆಡ್ಡಿಯವರನ್ನು ಗೆಲ್ಲಿಸಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಿ ಎಂದು ಕೋರಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...