ಯಾವುದೇ ಸಮುದಾಯದ ತುಷ್ಟೀಕರಣ ನಮಗೆ ಬೇಕಿಲ್ಲ: ‌ಬಿಜೆಪಿ-ಜೆಡಿಎಸ್‌ಗೆ ಸಚಿವ ಪರಮೇಶ್ವರ್ ತಿರುಗೇಟು

Date:

ಯಾವುದೇ ಸಮುದಾಯದ ತುಷ್ಟೀಕರಣ ಮಾಡುವ ಅಗತ್ಯತೆ ನಮಗಿಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ. ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ‌ ಕೆಲಸ‌ ಮಾಡುತ್ತಿದ್ದೇನೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರಿಂದ ಸರ್ಟಿಫಿಕೇಟ್ ಬೇಕಿಲ್ಲ. ನನಗೂ ಜವಾಬ್ದಾರಿ ಇದೆ. ಜವಾಬ್ದಾರಿ ಇಲ್ಲದೆ, ಆ ಸ್ಥಾನದಲ್ಲಿ ಕುಳಿತಿಲ್ಲ. ಕೆಲಸ ಮಾಡುತ್ತಿದ್ದೇವೆ. ನಾಗಮಂಗಲ ಘಟನೆಯನ್ನು ಸಮರ್ಥನೆ ಮಾಡುತ್ತಿದ್ದೇವೆಯೇ? ಯಾರು ಕಾರಣ ಆಗಿದ್ದಾರೆ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ? ಈಗಾಗಲೇ 52 ಜನರನ್ನು ಸುಮ್ಮನೆ ಬಂಧಿಸಲಾಗಿದೆಯೇ” ಎಂದು ಪ್ರಶ್ನಿಸಿದರು.

“ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ ಅಶೋಕ್ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ. ಗಣೇಶ ಮೆರವಣಿಗೆ ಹೊರಡಬೇಕಿದ್ದ ದಾರಿಯನ್ನು ಮುಂಚಿತವಾಗಿ ನೀಡಲಾಗಿತ್ತು. ಇದನ್ನು ಇನ್ಸ್‌ಪೆಕ್ಟರ್‌ ಬದಲಾಯಿಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಘಟನೆಗಳಾದರೆ ನಿಮ್ಮನ್ನೇ ಹೊಣೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ‌. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಾಗಮಂಗಲ ಗಲಾಟೆ | ಕರ್ತವ್ಯ ಲೋಪ ಆರೋಪ; ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್ ಅಮಾನತು

“ಯಾವುದೇ ಅಹಿತರ ಘಟನೆ ನಡೆಯದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುತ್ತೇವೆ. ಅದರ ಆಧಾರದ ಮೇಲೆ ಡಿಜಿ ರವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಂಬಂಧಪಟ್ಟ ಎಲ್ಲ ಎಸ್‌ಪಿ ಮತ್ತು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಸಾರ್ವಜನಿಕರೊಂದಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ, ಎಸ್‌ಪಿ‌ ಎಲ್ಲರು ಸಹ ಸಭೆಗಳನ್ನು ನಡೆಸಿರುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ವಾಹನ ಇಟ್ಟುಕೊಂಡು ಸಜ್ಜಾಗಿದ್ದರು” ಎಂದರು.

ಸರ್ಕಾರದ ಕುಮ್ಮಕ್ಕು ನೀಡಿದೆ, ಪೂರ್ವನಿಯೋಜಿತ ಘಟನೆ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಯಾವ ಸರ್ಕಾರನೂ ಹೋಗಿ ಗಲಾಟೆ ಮಾಡಿ ಅಂತ ಹೇಳುತ್ತಾರೆಯೇ? ಈ ರೀತಿ ಆಗಬಾರದಾಗಿತ್ತು ಅಂತ ಹೇಳುವುದೇ ತಪ್ಪು. ಇವರಿಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲವೇ? ನಾವು ಹಳ್ಳಿಯಿಂದ ಬಂದವರು, ಹಳ್ಳಿ ಭಾಷೆಯಲ್ಲಿ ಹೇಳುತ್ತೇವೆ. ಪುಸ್ತಕ ಭಾಷೆ ಬಳಸುತ್ತೇವೆಯೇ? ಒಂದು ಮಾತನ್ನು ಸ್ಪಷ್ಟವಾಗಿ ಹೇಳಲಿಚ್ಛಿಸುತ್ತೇನೆ. ರಾಜ್ಯದಲ್ಲಿ ಯಾರು ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ” ಎಂದು ಹೇಳಿದರು.

“ಯಾರೇ ಆಗಿರಲಿ. ಗಣೇಶ ಹಬ್ಬ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಿ, ಗಲಾಟೆ ಮಾಡಿದರೆ ಸುಮ್ಮನೆ ಬಿಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕೋ, ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಜರುಗಿಸುತ್ತೇವೆ” ಎಂದು ಎಚ್ಚರಿಸಿದರು.

“ಬಿಜೆಪಿಯವರು ಹೇಳಿಕೆಗಳನ್ನು ಟ್ವಿಸ್ಟ್ ಮಾಡಿ ವ್ಯಾಖ್ಯಾನ ಮಾಡಿಕೊಳ್ಳಲಿ. ಪರಮೇಶ್ವರ ಹೀಗೆ ಹೇಳಿದರು, ಸಣ್ಣದೆಂದರು, ದೊಡ್ಡದು ಎಂದರು ಹೇಳಿಕೊಳ್ಳಲಿ. ನನಗೂ ಅವರಂತೆ ಮಾತನಾಡುವುದಕ್ಕೆ ಬರುತ್ತದೆ. ನಾನು ನಿನ್ನೆಯೇ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು‌ ವಿಪಕ್ಷದವರಿಗೆ ಮನವಿ ಮಾಡಿದ್ದೇನೆ. ಆದರೂ ರಾಜಕೀಯ ಮಾಡುತ್ತೇವೆ ಅನ್ನುವುದಾದರೆ ಮಾಡಲಿ. ನಾವು ನಿಭಾಯಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...