ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ

Date:

  • ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ.ಡಿ.
  • ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ ಎಂದ ಜೆಡಿಎಸ್ ಶಾಸಕ

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹಾಗಾಗಿ, ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ. ಬಿಜೆಪಿ ಜೊತೆ ಸೇರಿ ಚುನಾವಣೆ ಎದುರಿಸೋಣ ಅನ್ನೋದು ಅಭಿಪ್ರಾಯ ಎಂದು ಹೇಳಿದರು.

ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಎಚ್​ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆ. 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದ್ದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ಸೋಲಿಸಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿದರು.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್‌ಗೆ ನಾಲ್ಕು ಕ್ಷೇತ್ರ : ಯಡಿಯೂರಪ್ಪ

“ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಲ್ಲಿ ಕೋರಿದ್ದೇನೆ” ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.

“ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಸಫಲವಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ” ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಶುಕ್ರವಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...