ರಾಜ್ಯಕ್ಕೆ NDRF ನಿಧಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶಿಸಲು ಕೋರಿ ಸುಪ್ರೀಂ ಮೊರೆ: ಸಿದ್ದರಾಮಯ್ಯ

Date:

ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ” ಎಂದು ವಿವರಿಸಿದರು.

“ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದ ಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ” ಎಂದು ಕಿಡಿಕಾರಿದರು.

ರಾಜ್ಯದ ಜನರಿಗೆ ಸ್ಪಂದಿಸಿಲ್ಲ

“ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ IMCT ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ” ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

“ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ” ಎಂದು ವಿವರಿಸಿದರು.

ನಯಾಪೈಸೆ ಬಿಡುಗಡೆ ಇಲ್ಲ

“ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ, ಕುಡಿಯುವ ನೀರಿಗೆ 870 ಕೋಟಿಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಡ ಸೂಚನೆಗಳನ್ನು ನೀಡಲಾಗಿದೆ” ಎಂದರು.

“4600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು” ಎಂದು ಹೇಳಿದರು.

ನಮಗೆ ಬೇರೆ ದಾರಿ ಇರಲಿಲ್ಲ

“ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, NDRF ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ” ಎಂದರು.

“ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರತ್ತೆ, ನಾಳೆ ಬರತ್ತೆ ಅಂತ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ದಾರಿ ಇರಲಿಲ್ಲ. ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ” ಎಂದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೇಂದ್ರದಿಂದ NDRF ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಸಕಲ ಪ್ರಯತ್ನಗಳನ್ನೂ ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...