ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

Date:

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರವಾದದ್ದು, ಅವರನ್ನು ನಾವು ಸದಾ ಸ್ಮರಿಸಬೇಕು ಎಂದೂ ಹೇಳಿದ್ದಾರೆ.

ಮಂಡ್ಯದಲ್ಲಿ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಹಾಸ್ಟೆಲ್ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. “ನಿರ್ಮಾಣವಾಗಲಿರುವ ಹಾಸ್ಟೆಲ್‌ನಲ್ಲಿ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲ ಜಾತಿಯ ಬಡವರಿಗೂ ಅವಕಾಶ ಇರುತ್ತದೆ. ದಾನಿಗಳು ಕೊಟ್ಟಷ್ಟು ಕೊಡಲಿ. ನಾನೂ ಸಹಾಯ ಮಾಡುತ್ತೇನೆ. ಮಂಡ್ಯದ ಜನ ಹತ್ತಾರು ವರ್ಷಗಳಿಂದ ನನಗೆ ಬಂಬಲ ಕೊಡುತ್ತಲೇ ಬರುತ್ತಿದ್ದಾರೆ” ಎಂದರು.

“ಮಂಡ್ಯದಲ್ಲಿನ ಕುರುಬರ ಹಾಸ್ಟೆಲ್ ಕಟ್ಟಡ ಶಿಥಿಲ ಆಗಿದ್ದನ್ನು ನೋಡಿದ್ದೆ. ಅನುದಾನ ಕೊಡಲು ಸರ್ಕಾರ ಸಿದ್ದವಿರುವುದಾಗಿಯೂ ಹೇಳಿದ್ದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶ ಈಡೇರಬೇಕಾದರೆ ಹಾಸ್ಟೆಲ್‌ಗಳ ಅಗತ್ಯವಿದೆ. ಹಳ್ಳಿಗಾಡಿನ ಮಕ್ಕಳೂ ವೈದ್ಯರು, ಎಂಜಿನಿಯರ್ ಗಳಾಗಬೇಕು. ಕೇವಲ ಒಂದು ವರ್ಗದವರು ಮಾತ್ರ ಆಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದೆ. ಮಾತ್ರವಲ್ಲ, ವಿದ್ಯುತ್ ಬಿಲ್, ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ. ಇವತ್ತೇನಾದರೂ ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಉಳಿದಿದ್ದರೆ, ವೈದ್ಯ ಕಾಲೇಜು, ಕೃಷಿ ವಿವಿ ಬಂದಿದೆ ಎಂದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಮತ್ತು ಸಚಿವ ಚಲುವರಾಯಸ್ವಾಮಿ ಅವರ ಕಾಳಜಿ, ಶ್ರಮ ಕಾರಣ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...