ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧ ಹೊಸ ಸಂಘಟನೆ ಕಟ್ಟುತ್ತೇವೆ: ಕೆ ಎಸ್​ ಈಶ್ವರಪ್ಪ

Date:

ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧವಾಗಿರುತ್ತದೆ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ ಕೈಗೊಳ್ಳುತ್ತೇವೆ. ಹುಬ್ಬಳ್ಳಿಯಲ್ಲಿ ಎಲ್ಲ ಜಾತಿಯವರನ್ನು ಸೇರಿಸಿ ಮೊದಲ ಸಭೆ ಮಾಡಿದ್ದೇವೆ. ಎಲ್ಲ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆ ಬಂದಿವೆ” ಎಂದರು.

“ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಸಂಘಟನೆ ಬೇಕಾಗಿದೆ. ಹೀಗಾಗಿ ಸ್ವಾಮೀಜಿಗಳ ಸೂಚನೆಯಂತೆ ಒಂದು ಸಂಘಟನೆ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಸಂಘಟನೆಗೆ ಎಲ್ಲ ಸಮುದಾಯಗಳ ಶ್ರೀಗಳು, ಮುಖಂಡರು ಬೆಂಬಲ ಕೊಡುತ್ತೇವೆ ಎಂದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಗಲಕೋಟೆಯ ಚರಂತಿ ಮಠ ಸಮುದಾಯ ಭವನದಲ್ಲಿ ಅಕ್ಟೋಬರ್ 20 ರಂದು ಕಾರ್ಯಕ್ರಮ ನಡೆಯಲಿದೆ. 30 ರಿಂದ 40 ಜನ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಬಾಗಲಕೋಟೆ ಸಭೆ ಬಳಿಕ ಅಂತೀಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

“ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿ ಎಸ್​ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು ಕೊಡಲು ಕಾರಣವೇನು ಎಂದು ಬಿ ಎಸ್​ ಯಡಿಯೂರಪ್ಪ ಅವರು ಕಾರಣ ಹೇಳಿಲ್ಲ. ಸಂಘಟನೆ ಬೇಡಾ ಅಂತ ಮಾತ್ರ ಹೇಳಿದರು. ಅವತ್ತು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು” ಎಂದರು.

“ಅಪ್ಪ ಮಕ್ಕಳ ಹೊಂದಾಣಿಕೆಯಿಂದ ಬಿಜೆಪಿ ಮುಕ್ತಿಯಾಗಬೇಕು. ಬಿಜೆಪಿ ಶುದ್ಧೀಕರಣವಾಗಲು ಚುನಾವಣೆ ನಿಂತಿದ್ದೆ. ನಾನು ಬಿಜೆಪಿ ಸೇರಲ್ಲ, ನನಗೆ ಸಮಾಧಾನ ಆದರೆ ಮಾತ್ರ ವಾಪಸ್ ಬಿಜೆಪಿ ಸೇರುತ್ತೇನೆ. ನನ್ನ ಮಗನಿಗೆ ಹಾವೇರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳೆ​ ಯಡಿಯೂರಪ್ಪ ಮೋಸ ಮಾಡಿದರು” ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಕೆ ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ವೀರಭದ್ರಪ್ಪ ಹಾಲರವಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...