ಏನೇ ಆದರೂ ಬಿಜೆಪಿಯ ಷಡ್ಯಂತ್ರ ವಿಫಲಗೊಳಿಸುತ್ತೇವೆ: ರಾಹುಲ್ ಗಾಂಧಿ

Date:

ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರವು ಅಳವಡಿಸಲು ಮುಂದಾಗಿದ್ದ ‘ಲ್ಯಾಟರಲ್ ಎಂಟ್ರಿ’ಯನ್ನು ಇದೀಗ ಹಿಂಪಡೆದುಕೊಂಡಿದೆ. ‘ಲ್ಯಾಟರಲ್ ಎಂಟ್ರಿ’ಯ ಜಾರಿಗೆ ಮುಂದಾಗಿದ್ದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಏನಾ ಆಗಲೀ, ಯಾವುದೇ ಬೆಲೆ ತೆತ್ತಾದರೂ ಬಿಜೆಪಿ ಷಡ್ಯಂತ್ರಗಳನ್ನು ವಿಫಲಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಲ್ಯಾಟರಲ್ ಎಂಟ್ರಿಯನ್ನು ಖಂಡಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ರಕ್ಷಿಸುತ್ತೇವೆ. ಬಿಜೆಪಿ ರೂಪಿಸುವ ಲ್ಯಾಟರಲ್ ಎಂಟ್ರಿಯಂತಹ ಷಡ್ಯಂತ್ರಗಳನ್ನು ವಿಫಲಗೊಳಿಸುತ್ತೇವೆ” ಎಂದಿದ್ದಾರೆ.

“ಸರ್ಕಾರದ ಉನ್ನತ ಹುದ್ದೆಗಳಿಗೆ ‘ಲ್ಯಾಟರಲ್ ಎಂಟ್ರಿ’ ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣತರನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಸಂಚು ಹೂಡುತ್ತಿದೆ. ‘ಲ್ಯಾಟರಲ್ ಎಂಟ್ರಿ’ ಅಳವಡಿಕೆಯು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಹುನ್ನಾರವಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀಸಲಾತಿಗೆ ಇರುವ ಶೇ.50ರ ಮಿತಿಯನ್ನು ತೆರವುಗೊಳಿಸುತ್ತೇವೆ. ಜಾತಿ ಜನಗಣತಿ ನಡೆಸಿ, ಅದರ ಆಧಾರದ ಮೇಲೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುತ್ತೇವೆ” ಎಂದಿದ್ದಾರೆ.

ಆಗಸ್ಟ್ 17 ರಂದು UPSC ಲ್ಯಾಟರಲ್ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತ್ತು. ಸರ್ಕಾರಿ ಇಲಾಖೆಗಳಲ್ಲಿ ಖಾಸಗಿ ವಲಯದವರನ್ನೂ ಒಳಗೊಂಡ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದು ಹೇಳಿಕೊಂಡಿತ್ತು. ಈ ನಿರ್ಧಾರವು ಹಿಂದುಳಿತ ಮತ್ತು ತಳ ಸಮುದಾಯಗಳ ಮೀಸಲಾತಿ ಹಕ್ಕನ್ನು ಕಸಿದುಕೊಳ್ಳಲಿದೆ ಎಂದು ವಿರೋಧ ವ್ಯಕ್ತವಾದ ಬಳಿಕ, ‘ಲ್ಯಾಟರಲ್ ಎಂಟ್ರಿ’ ಅಳವಡಿಕೆಯ ಜಾಹೀರಾತನ್ನು ಪ್ರಕಟಿಸದಂತೆ ಕೇಂದ್ರದ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆ ಪ್ರೀತಿ ಸೂದನ್‌ ಅವರಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...