ರೈತರು-ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಸಚಿವ ಕೆ.ವೆಂಕಟೇಶ್

Date:

ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ವಿಧಾನಪರಿತ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ.

ಸದಸ್ಯರಾದ ಉಮಾಶ್ರೀ ಮತ್ತು ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಲಿನ ದರವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ರೈತರಿಂದ ಕೇಳಿ ಬಂದಿದೆ. ಪ್ರತಿ ಲೀಟರ್‌ಗೆ 10 ರೂ. ಹೆಚ್ಚಳ ಮಾಡಬೇಕೆಂದು ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಂಘಗಳು ಸಹಾ ಸಮ್ಮತಿಸಿವೆ” ಎಂದರು.

“ಅಂತಿಮವಾಗಿ ರೈತರು ಮತ್ತು ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಎಷ್ಟು ಸಾಧ್ಯವೋ ಅಷ್ಟು ಬೇಗ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಈಗಾಗಲೇ ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನಕ್ಕೆ ಒಂದು ಕೋಟಿ ಲೀಟರ್‌ಗೆ ಹೆಚ್ಚಳವಾಗಿದೆ. ಹಿಂದೆ 95 ಲಕ್ಷ ಇತ್ತು. ಈಗ ಒಂದು ಕೋಟಿಗೂ ಅಧಿಕವಾಗಿದೆ. ಉತ್ಪಾದನಾ ವೆಚ್ಚವು ಹೆಚ್ಚಾಗುತ್ತಿದೆ. ಇದೆಲ್ಲಾ ಅಂಶಗಳನ್ನು ಪರಿಗಣಿಸಿ ನಾವು ಯಾರಿಗೂ ಹೊರೆಯಾಗದಂತೆ ದರ ಪರಿಷ್ಕರಣೆ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರಿಗೆ 665.07 ಕೋಟಿ ಬಾಕಿ ಹಣವಿದೆ. ಪ್ರೋತ್ಸಾಹ ಧನ ನೀಡುವುದರಿಂದ ರೈತರಿಗೆ ಅನುಕೂಲವಾಗಲಿದೆ. ಕಳೆದ ಅಕ್ಟೋಬರ್ ತಿಂಗಳಿನಿಂದ ರೈತರ ಖಾತೆಗೆ ಪ್ರೋತ್ಸಾಹ ಹಣ ತಲುಪಿಲ್ಲ. ಹೀಗಾದರೆ ರೈತರು ಏನು ಮಾಡಬೇಕು” ಎಂದು ಸದಸ್ಯರು ಪ್ರಶ್ನಿಸಿದಾಗ, “ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಉತ್ಪಾದನೆಗೆ ತಕ್ಕಂತೆ ಬಜೆಟ್‌ನಲ್ಲಿ ಅನುದಾನವನ್ನು ನಿಗದಿಪಡಿಸಿಲ್ಲ. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು 1300ರಿಂದ 1500 ಕೋಟಿ ರೂ. ಅನುದಾನವನ್ನು ಒದಗಿಸಿದರು. ನಮ್ಮ ಸರ್ಕಾರದ ಅವಧಿಯಲ್ಲಿ ಮಾತ್ರ ಪ್ರೋತ್ಸಾಹ ಹಣ ಬಾಕಿಯಿಲ್ಲ. ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಅವಧಿಯಲ್ಲಿ ಹಾಲಿನ ಪ್ರೋತ್ಸಾಹವನ್ನು ಬಾಕಿ ಉಳಿಸಿಕೊಳ್ಳಲಾಗಿತ್ತು. ಅವರು ಸರಿಯಾಗಿ ಪಾವತಿ ಮಾಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಬಾಕಿ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿದ್ದೇವೆ. ರೈತರಿಗೆ ಬಾಕಿ ಹಣವನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಬಿಡುಗಡೆ ಮಾಡುತ್ತೇವೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...