ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ಜನರ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.‌

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು.

“ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ?” ಎಂದು ಪ್ರಧಾನಿ ನರೇಂದ್ರ ಮೋದಿಯವರ ಆಶ್ವಾಸನೆಗಳ ಸರಣಿ ಸುಳ್ಳುಗಳನ್ನು ಪಟ್ಟಿ ಮಾಡಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ” ಎಂದು ವ್ಯಂಗ್ಯವಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸಿ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಮ್ಮ ʼಭ್ರಷ್ಟಾಚಾರ ಮುಕ್ತ ಭಾರತʼದಲ್ಲಿ ಬಿಜೆಪಿ ಇಲ್ಲವೇ ಮೋದಿಜಿ?

“ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ ,ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

“ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಿ” ಎಂದು ಕರೆ ನೀಡಿದರು.

“ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ” ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಸಿಎಂ ಡಿ.ಕೆ.ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...