ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

Date:

  • ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರದ್ದು
  • ಬಿಜೆಪಿ ಪರಿವಾರ ತಾರತಮ್ಯವನ್ನು ಕಾಂಗ್ರೆಸ್ ದೂರ ಸರಿಸಿದೆ

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ನೈತಿಕ ಪೊಲೀಸ್‌ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮತೀಯ ಗಲಭೆಯಿಂದ ಸಾವನ್ನಪ್ಪಿದ ಆರು ಮಂದಿಯ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್‌ಗಳನ್ನು ಸಿಎಂ ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮಗೆ ಎಲ್ಲರ ಹಿತ ಮುಖ್ಯ. ಹೀಗಾಗಿ ನಮ್ಮ ಅವಧಿಯಲ್ಲಿ ಕಾನೂನು ಮೀರಿ ಸಾಗುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ಸುದ್ದಿ ಓದಿದ್ದೀರಾ? :ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಅಷ್ಟು ಸಾಲದು ಎನ್ನುವಂತೆ ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯ ಮಾಡಿತ್ತು. ಈಗ ನಾವದನ್ನು ಸರಿ ಪಡಿಸಿದ್ದೇವೆ ಎಂದು ಸಿಎಂ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...