ಜನರ ಅಪೇಕ್ಷೆ ಈಡೇರಿಸಲು ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ: ‘ಇಂಡಿಯಾ’ ಸಭೆ ಬಳಿಕ ಖರ್ಗೆ

Date:

“ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ ಬಳಿಕ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಂಡಿಯಾ ಮೈತ್ರಿಕೂಟದ ಸಂಚಾಲಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, “ನಮ್ಮ ಮೈತ್ರಿಕೂಟಕ್ಕೆ ಸಿಕ್ಕಿರುವ ಅಗಾಧ ಬೆಂಬಲಕ್ಕಾಗಿ ಭಾರತದ ಜನತೆಗೆ ಇಂಡಿಯಾ ಒಕ್ಕೂಟದಲ್ಲಿರುವ ಪಕ್ಷಗಳ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಬಿಜೆಪಿ ಮತ್ತು ಅವರ ದ್ವೇಷ, ಭ್ರಷ್ಟಾಚಾರದ ರಾಜಕಾರಣಕ್ಕೆ ಈ ಬಾರಿಯ ಜನಾದೇಶವು ತಕ್ಕ ಉತ್ತರವನ್ನು ನೀಡಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿಯ ಫಲಿತಾಂಶವು ಭಾರತದ ಸಂವಿಧಾನದ ರಕ್ಷಣೆ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಂಡವಾಳಶಾಹಿಗಳ ವಿರುದ್ಧದ ತೀರ್ಪಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಇಂಡಿಯಾ ಒಕ್ಕೂಟವು ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಹೋರಾಡುವುದನ್ನು ಮುಂದುವರಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.

“ಬಿಜೆಪಿ ನೇತೃತ್ವದ ಸರ್ಕಾರವು ಆಡಳಿತ ನಡೆಸಕೂಡದು ಎಂಬುದು ಜನರ ಆಶಯ. ಈ ಆಶಯವನ್ನು ಈಡೇರಿಸಲು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ನಿರ್ಧಾರವಾಗಿದ್ದು, ಆ ಮೂಲಕ ನಾವು ಜನರಿಗೆ ನೀಡಿದ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಇಂಡಿಯಾ ಮೈತ್ರಿಕೂಟದ ಸಂಚಾಲಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಿವಸೇನೆಯ ಸಂಜಯ್ ರಾವತ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್, ಎನ್‌ಸಿಪಿ(ಎಸ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌, ಸಿಪಿಎಂನ ಸೀತಾರಾಂ ಯೆಚೂರಿ, ಕಲ್ಪನಾ ಸೊರೇನ್, ಜಾರ್ಖಂಡ್ ಸಿಎಂ ಚಂಪೈ ಸೊರೇನ್, ಡಿ ರಾಜಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...