ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

Date:

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ 20 ಕ್ಷೇತ್ರಗಳನ್ನು ನಾವು ಗೆಲುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಅವರು ಮಾತನಾಡಿ, “ಜೆಡಿಎಸ್ ಅಭ್ಯರ್ಥಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಸ್ಪರ್ಧೆ ಮಾಡಲು ನಿಮ್ಮ ಬಳಿ ಬೇರೆ ಜನ ಇರಲಿಲ್ಲವೇ? ನಿಮ್ಮನ್ನು ಶಾಸಕ, ಮುಖ್ಯಮಂತ್ರಿ ಮಾಡಿದ ಜನರಿಗೆ ಅವಕಾಶ ನೀಡಬಹುದಿತ್ತಲ್ಲವೇ? ನಿಮ್ಮನ್ನು ಆರಿಸಿ ಕಳುಹಿಸಿದ ಜನರ ಕಿವಿ ಮೇಲೆ ಹೂ ಇಟ್ಟು, ಈಗ ಈ ಮಂಡ್ಯ ಜನರನ್ನು ಯಾಮಾರಿಸಲು ಬಂದಿದ್ದೀರಾ?” ಎಂದು ಕುಮಾರಸ್ವಾಮಿ ಅವರನ್ನು ಕುಟುಕಿದರು.

“ಈ ಮಣ್ಣಿನ ಮಹಿಳೆಯರು ತಮ್ಮ ಸ್ವಾಭಿಮಾನಕ್ಕಾಗಿ ಹೋರಾಟ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳು. ನಿಮಗೆ ಅಪಮಾನ ಮಾಡಿದವರನ್ನು ಗೋಬ್ಯಾಕ್ ಎಂದು ಹೇಳಿದ್ದೀರಿ. ಅವರನ್ನು ಕೇವಲ ಮಂಡ್ಯದಿಂದ ಮಾತ್ರವಲ್ಲ, ರಾಜ್ಯದಿಂದಲೇ ಗೋಬ್ಯಾಕ್ ಮಾಡಿ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಈ ತಾಯಂದಿರು ದಾರಿತಪ್ಪುತ್ತಿದ್ದಾರೆ ಎಂದು ಹೇಳಿದವರಿಗೆ ನೀವು ಧಿಕ್ಕಾರ ಕೂಗಿದ್ದೀರ. ನಿಮ್ಮ ಶೌರ್ಯ ಹಾಗೂ ಶಕ್ತಿಗೆ ನಮಿಸುತ್ತೇನೆ. ನೀವು ಹಳ್ಳಿ ಹಳ್ಳಿಗೆ ಹೋಗಿ ಪ್ರಚಾರ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾವಿರಾರು ಮಂದಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಮಂಡ್ಯದ ಎಲ್ಲಾ ಶಾಸಕರು, ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿ ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ” ಎಂದರು.

“ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ಭಾರತದಲ್ಲಿ ನ್ಯಾಯ ಯಾತ್ರೆ ಮಾಡಿದ್ದಾರೆ. ಈಗ ಮಂಡ್ಯದಲ್ಲಿ ನಿಮ್ಮ ಸೇವೆ ಮಾಡಲು ಮಂಡ್ಯದವರಿಗೇ, ರೈತನ ಮಗ ವೆಂಕಟರಮಣೇಗೌಡ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇಲ್ಲಿ ಕೇವಲ ಸ್ಟಾರ್ ಚಂದ್ರು ಅವರು ಮಾತ್ರ ಅಭ್ಯರ್ಥಿಯಲ್ಲ. ಇಲ್ಲಿ ಈ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಅಭ್ಯರ್ಥಿಯೇ” ಎಂದು ಮಾರ್ಮಿಕವಾಗಿ ಮಾತನಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...