ಮಹಾತ್ಮಾ ಗಾಂಧಿ ಹೇಳಿದ ರಾಮನನ್ನು ಪೂಜಿಸುತ್ತೇವೆ, ಬಿಜೆಪಿ ಹೇಳಿದ ರಾಮನನ್ನು ಅಲ್ಲ: ಸಿದ್ದರಾಮಯ್ಯ

Date:

ಕಾಂಗ್ರೆಸ್‌ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು, ಕೇವಲ ಬಿಜೆಪಿಯವರ ದೇವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಶ್ರೀರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ” ಎಂದರು.

“ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ, ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

“ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ” ಎಂದರು.

ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ

ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು,ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ” ಎಂದರು.

“ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪನವರ ಅಧ್ಯಕ್ಷತೆಯ ಏಕಸದಸ್ಯ ಆಯೋಗ ತನಿಖೆ ಮಾಡಿ ಇಂದು ವರದಿಯನ್ನು ಸಲ್ಲಿಸಿದ್ದಾರೆ, ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...