ಬಿಹಾರ | ಉದ್ಯಮಿ ಖೇಮ್ಕಾ ಹತ್ಯೆ ಬೆನ್ನಲ್ಲೇ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಕೊಲೆ

Date:

ಬಿಹಾರದ ಪಟನಾದಲ್ಲಿ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ವಾರದ ನಂತರ ಮತ್ತೊಂದು ಕೊಲೆ ನಡೆದಿದೆ. ಪಟನಾದಲ್ಲಿ ಬಿಜೆಪಿ ನಾಯಕನ ಹತ್ಯೆಯಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶೇಕ್‌ಪುರದಲ್ಲಿ ಬಿಜೆಪಿ ನಾಯಕ ಸುರೇಂದ್ರ ಕೆವಾತ್ ಅವರನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾರೆ.

ಬಿಜೆಪಿ ನಾಯಕನ ಮೇಲೆ ನಾಲ್ಕು ಗುಂಡುಗಳನ್ನು ಹಾರಿಸಲಾಗಿದ್ದು, ಪಟನಾದ ಏಮ್ಸ್‌ಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಯ ಸಮಯದಲ್ಲಿ ನಿಧನರಾಗಿದ್ದಾರೆ. ಶಾಸಕ ಗೋಪಾಲ್ ರವಿದಾಸ್ ಮತ್ತು ಮಾಜಿ ಸಚಿವ ಶ್ಯಾಮ್ ರಜಕ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಕೊಲೆಯ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರದ ಉದ್ಯಮಿ ಗೋಪಾಲ್‌ ಖೇಮ್ಕಾ ಕೊಲೆಯ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಕನ್ಹಯ್ಯಾ ಸಿಂಗ್, “ಸುರೇಂದ್ರ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಅವರನ್ನು ಏಮ್ಸ್‌ಗೆ ಕರೆದೊಯ್ಯಲಾಗಿತ್ತು, ಚಿಕಿತ್ಸೆ ವೇಳೆ ಮೃತಪಟ್ಟರು. ನಾವು ಅವರ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

ಸುರೇಂದ್ರ ಕೆವಾತ್ ಈ ಹಿಂದೆ ಬಿಜೆಪಿ ಕಿಸಾನ್ ಮೋರ್ಚಾ ನಾಯಕರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ನಡೆದಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ನಡೆಯುತ್ತಿರುವ ಕೊಲೆಗಳ ವಿಚಾರದಲ್ಲಿ ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿದೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಎಕ್ಸ್‌ನಲ್ಲಿ ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಾರೆ. “ಪಟನಾದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಏನು ಹೇಳಬೇಕು ಮತ್ತು ಯಾರಿಗೆ? ಎನ್‌ಡಿಎ ಸರ್ಕಾರದಲ್ಲಿ ಯಾರಾದರೂ ಸತ್ಯವನ್ನು ಕೇಳಲು ಅಥವಾ ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...