ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲು ಸಿಎಂ ಅನುಮೋದನೆ: ಸಚಿವ ಮಧು ಬಂಗಾರಪ್ಪ

Date:

  • ಮುಂದಿನ ವರ್ಷ ಪಿಯುಸಿ ಪರೀಕ್ಷಾ ಮಾದರಿ ಬದಲಾವಣೆ
  • ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು

ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿ ವಾರಕ್ಕೆ ಎರಡು ಮೊಟ್ಟೆ ನೀಡಲು ಅನುಮೋದಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊಟ್ಟೆ ಮತ್ತು ಶೂ ನೀಡುವ ವಿಚಾರದಲ್ಲಿ ಎಸ್​ಡಿಎಮ್​ಸಿ ಅವರಿಗೆ ಎಲ್ಲ ಅಧಿಕಾರ ನೀಡಲಾಗಿದೆ. 280 ಕೋಟಿ ರೂ. ಈ ಮೊಟ್ಟೆ ನೀಡಲು ಸದ್ಯ ಯೋಜನೆ ರೂಪಿಸಲಾಗಿದೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೆ ಇರುವವರಿಗೆ ಚಿಕ್ಕಿ ಮತ್ತು ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಗುಣಮಟ್ಟ ಚೆನ್ನಾಗಿಲ್ಲ ಎಂದರೆ ಎಸ್​ಡಿಎಮ್​ಸಿ ಅವರೇ ಜವಾಬ್ದಾರಿ ಎಂದು ತಿಳಿಸಿದರು.

ಹಿಂದಿನ ಸರ್ಕಾರ ವಾರದಲ್ಲಿ ಒಂದು ಮೊಟ್ಟೆ ನೀಡುತ್ತಿತ್ತು. ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ಕೊಡುವುದರಿಂದ ಮಾರ್ಜಿನಲ್ ಹೆಲ್ಪ್ ಆಗಿದೆ ಅಷ್ಟೇ. ಶಿಕ್ಷಣ ವ್ಯವಸ್ಥೆಯಲ್ಲಿ ಇರುವ ಸಮಸ್ಯೆ ಮುಖ್ಯಮಂತ್ರಿಗೂ ಗೊತ್ತು. ಹೀಗಾಗಿ ನಾನು ಅವರ ಬಳಿ ಮನವಿ ಮಾಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಅಧಿಕಾರಕ್ಕೆ ಬಂದಾಗ ನನ್ನ ಕ್ಷೇತ್ರದಲ್ಲಿ 52 ಶಾಲೆಯಲ್ಲಿ ಶಿಕ್ಷಕರೇ ಇರಲಿಲ್ಲ. ಎಷ್ಟೋ ಪೋಷಕರು ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುತ್ತಾರೆ. ನಾವು ಮುಂದಿನ ಎಂಟು ತಿಂಗಳ ಒಳಗೆ ಕೆಲವೊಂದಿಷ್ಟು ಯೋಜನೆಗಳನ್ನು ಸಿದ್ಧಪಡಿಸಿದ್ದೇವೆ. ಈ ವ್ಯವಸ್ಥೆ ಯಾವ ರೀತಿ ನಡೆಯುತ್ತದೆ ಎಂಬುದನ್ನು ನಾನು ಈಗ ತಿಳಿದು ಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಈ ಸುದ್ದಿಓದಿದ್ದೀರಾ? ತಾಯಿ ಮರಣ ಪ್ರಮಾಣ ತಡೆಗಟ್ಟಲು ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಮತ್ತು ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ. ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಸ್ ಕೋರ್ಟ್​ನಲ್ಲಿದೆ, ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದರು.

ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕಿದೆ. ಪಠ್ಯ ಪುಸ್ತಕ ಪರಿಷ್ಕೃರಣೆ ತುಂಬಾ ಮಾಡಬೇಕಿದೆ. ಸದ್ಯ ನಾವು ಕೆಲವು ಮಾತ್ರ ಪರಿಷ್ಕರಣೆ ಮಾಡಬೇಕಿದೆ. ಮುಂದಿನ ವರ್ಷದಿಂದ ಪಿಯುಸಿ ಪರೀಕ್ಷಾ ಮಾದರಿಯಲ್ಲಿಯೂ ಬದಲಾವಣೆ ಮಾಡುತ್ತೇವೆ. 20 ಆಂತರಿಕ ಅಂಕ ನೀಡಲು ಆದೇಶ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...