ಬಾಲಾಸಾಹೇಬರ ಸಿದ್ಧಾಂತ ತ್ಯಜಿಸಿದವರ ಪಾಪ ತೊಳೆಯಲು ಕುಂಭಮೇಳಕ್ಕೆ ಹೋದೆ: ಉದ್ಧವ್‌ಗೆ ಶಿಂದೆ ತಿರುಗೇಟು

Date:

ಶಿವಸೇನೆ ಸ್ಥಾಪಕ ಬಾಲಾಸಾಹೇಬ ಠಾಕ್ರೆ ಅವರ ಸಿದ್ಧಾಂತ ತ್ಯಜಿಸಿ ಪಾಪ ಮಾಡಿದವರ ಪಾಪವನ್ನು ತೊಳೆಯಲು ತಾನು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿರುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ತಿರುಗೇಟು ನೀಡಿದ್ದಾರೆ.

ಶಿಂದೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನವನ್ನು ಮಾಡಿದ್ದಾರೆ. ಇದನ್ನು ಟೀಕಿಸಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು “ಗಂಗಾ ನದಿಯಲ್ಲಿ ಮುಳುಗಿ ಏಳುವುದರಿಂದ ಮಹಾರಾಷ್ಟ್ರಕ್ಕೆ ದ್ರೋಹ ಬಗೆದ ಪಾಪ ಹೋಗುವುದಿಲ್ಲ” ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ ಇಂದು ಶಿವರಾತ್ರಿಯೊಂದಿಗೆ ಮುಕ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಧವ್ ಠಾಕ್ರೆ ಹೇಳಿಕೆಗೆ ಸಂತ ರವಿದಾಸ ಮಹಾರಾಜ ಜಯಂತಿ ತಿರುಗೇಟು ನೀಡಿದ ಶಿಂದೆ, “ಸುಮಾರು 65 ಕೋಟಿ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನ ಮತ್ತು ಸರಸ್ವತಿ ನದಿ ಕೂಡುವ ತ್ರೀವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಯಾಗ್‌ರಾಜ್ ಮತ್ತು ಮಹಾ ಕುಂಭಮೇಳದೊಂದಿಗೆ ಯಾವುದೇ ಸಂಬಂಧವಿಲ್ಲದವರ ಬಗ್ಗೆ ನಾನು ಏನು ಹೇಳುವುದು” ಎಂದು ಠಾಕ್ರೆಯನ್ನು ಕುಟುಕಿದ್ದಾರೆ.

“ನಾನು ನನ್ನ ಪಾಪವನ್ನು ತೊಳೆಯಲು ಕುಂಭಮೇಳಕ್ಕೆ ಹೋದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಆದರೆ ನಾನು ಅಲ್ಲಿಗೆ ಆಧ್ಯಾತ್ಮಿಕ ಪರಿಪೂರ್ಣತೆಯನ್ನು ಪಡೆಯಲು ಹೋದೆ. ಹಾಗೆಯೇ ಬಾಲಾಸಾಹೇಬ್ ಠಾಕ್ರೆ ಅವರ ಸಿದ್ಧಾಂತ, ಶಿವಸೇನೆ ಮತ್ತು ತಮ್ಮ ಪೂರ್ವಜರ ಪಕ್ಷವನ್ನು ತ್ಯಜಿಸಿದವರ ಪಾಪವನ್ನು ತೊಳೆಯಲು ನಾನು ಮಹಾ ಕುಂಭಮೇಳಕ್ಕೆ ಹೋದೆ” ಎಂದು ತಿಳಿಸಿದ್ದಾರೆ.

“ನಾನು ಅವರ ಪಾಪವನ್ನು ತೊಳೆಯಲು ಅಲ್ಲಿಗೆ ಹೋದೆ. ಆದರೆ ಅವರು ತಮ್ಮ ಪಾಪವನ್ನು ಮುಚ್ಚಿಡಲು ಲಂಡನ್‌ಗೆ ಹೋದರು. ಈಗ ಮಹಾ ಕುಂಭಮೇಳವನ್ನು ಕೂಡಾ ಅಪಮಾನ ಮಾಡುತ್ತಿದ್ದಾರೆ. ಸುತ್ತಲೂ ನಡೆಯುವ ಉತ್ತಮ ಕಾರ್ಯವನ್ನು ನೋಡಿ ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು (ಉದ್ಧವ್ ಠಾಕ್ರೆ) ನಮ್ಮನ್ನು ದ್ರೋಹಿಗಳೆಂದು ಕರೆಯುತ್ತಾರೆ. ಆದರೆ ನೀವು ಶಿವಸೇನೆಯ 60 ಶಾಸಕರಿಗೆ ಮತ ನೀಡಿ ಆಯ್ಕೆ ಮಾಡಿದ ಜನರನ್ನು ನೀವು ಏನು ಕರೆಯುತ್ತೀರಿ” ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...