ಪಶ್ಚಿಮ ಬಂಗಾಳ | ಚುನಾವಣೆಗಳಲ್ಲಿ ಹಿಂಸಾಚಾರ ಸಹಿಸುವುದಿಲ್ಲ: ರಾಜ್ಯಪಾಲ ಆನಂದ್ ಬೋಸ್

Date:

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳನ್ನು ಶಾಂತಿಯುತವಾಗಿ ನಡೆಸಲಾಗುವುದು ಮತ್ತು ಯಾವುದೇ ಹಿಂಸಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೋಲ್ಕತ್ತಾದ ಭಾರತೀಯ ವಿಚಾರ ಕೇಂದ್ರದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾಗಲಿದ್ದು, ಚುನಾವಣೆಗಳಲ್ಲಿ ಪಾಲ್ಗೊಳ್ಳುವ ಜವಾಬ್ದಾರಿಯನ್ನು ಹೊಂದಿರುವ ಎಲ್ಲ ಪಕ್ಷಗಳು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಮುಂದಾಗಬೇಕು. ಇದಕ್ಕೆ ರಾಜ್ಯದಲ್ಲಿರುವ ಎಲ್ಲ ರಾಜಕೀಯ ಪಕ್ಷಗಳು ಹೊಣೆಗಾರರು” ಎಂದು ರಾಜ್ಯಪಾಲರು ಹೇಳಿದರು.   

ಚುನಾವಣೆಯ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ವಿವಿಧ ರಾಜಕೀಯ ಪಕ್ಷಗಳಿಂದ ಮಧ್ಯ ಪ್ರವೇಶಿಸುವಂತೆ ಹಲವಾರು ಮನವಿಗಳನ್ನು ಸ್ವೀಕರಿಸಿದ ಬೋಸ್, ರಾಜ್ಯ ಚುನಾವಣಾ ಆಯೋಗವನ್ನು ತುರ್ತು ಸಭೆಗೆ ಕರೆದಿದ್ದರು. ಅಲ್ಲದೆ ಸ್ಥಳೀಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರದ ಸಂದರ್ಭದಲ್ಲಿ ಹಿಂಸಾಚಾರ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | 220 ತಿಂಗಳಲ್ಲಿ 225 ಹಗರಣಗಳು; ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿ ಜುಲೈ 8ರಂದು ನಡೆಯಲಿರುವ ಪಂಚಾಯತ್ ಚುನಾವಣೆ ತೀವ್ರ ಕಾವು ಪಡೆದಿದ್ದು, ನಾಮಪತ್ರ ಸಲ್ಲಿಸುವ ಮೊದಲ ದಿನವೇ ಹಿಂಸಾಚಾರ ನಡೆದಿದೆ. ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಕೆಲವೆಡೆ ಘರ್ಷಣೆ ಉಂಟಾದ ಕಾರಣ ಬಿಡಿಒ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಟಿಎಂಸಿ, ಸಿಪಿಎಂ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ಡೋಮ್‌ಕಲ್‌ನ ಪ್ರದೇಶದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ಫೂಲ್ಚಂದ್ ಶೇಖ್(45) ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಫೂಲ್ಚಂದ್ ಅವರ ಹತ್ಯೆ ಹಿಂದೆ ಟಿಎಂಸಿಯ ಕೈವಾಡ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಕರಣ ಸಂಬಂಧ ಸ್ಥಳೀಯ ತೃಣಮೂಲ ಪಕ್ಷದ ಮುಖಂಡ ಬಶೀರ್ಮೊಲ್ಲಾ ಎಂಬಾತನನ್ನು ಬಂಧಿಸಿದ್ದು, ಆತನ ಬಳಿ ಇದ್ದ ಗನ್ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...