ಪಶ್ಚಿಮ ಬಂಗಾಳ| ಮತದಾನದ ವೇಳೆ ಹಿಂಸಾಚಾರ, ಇವಿಎಂಗಳನ್ನು ಕೊಳಕ್ಕೆ ಎಸೆದ ಉದ್ರಿಕ್ತ ಗುಂಪು

Date:

ಪಶ್ಚಿಮ ಬಂಗಾಳದ ಮತದಾನದ ವೇಳೆ ಹಿಂಸಾಚಾರ ನಡೆದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಉದ್ರಿಕ್ತ ಗುಂಪು ಮತದಾನ ಕೇಂದ್ರಗಳಿಗೆ ನುಗ್ಗಿದೆ. ಉದ್ರಿಕ್ತ ಗುಂಪು ಇವಿಎಂ ಅನ್ನು ಕೊಳಕ್ಕೆ ಎಸೆದು ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದೆ.

ಕೆಲವು ಮತಗಟ್ಟೆ ಏಜೆಂಟರನ್ನು ಮತಗಟ್ಟೆಗಳಿಗೆ ಪ್ರವೇಶಿಸದಂತೆ ತಡೆಹಿಡಿದ ಬಳಿಕ ಈ ಹಿಂಸಾಚಾರ ನಡೆದಿದೆ ಎನ್ನಲಾಗಿದೆ. ಮತಗಟ್ಟೆ ಏಜೆಂಟರಿಗೆ ಪ್ರವೇಶ ನಿರ್ಬಂಧಿಸಿದಾಗ ಆಕ್ರೋಶಗೊಂಡ ಸ್ಥಳೀಯರು ಬಲವಂತವಾಗಿ ಮತದಾನ ಕೇಂದ್ರಕ್ಕೆ ನುಗ್ಗಿದ್ದು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಹೊಂದಿರುವ ಇವಿಎಂ ಅನ್ನು ವಶಕ್ಕೆ ಪಡೆದು ಅದನ್ನು ಕೊಳಕ್ಕೆ ಎಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಒಡಿಶಾ| ಚುನಾವಣಾ ಪೂರ್ವ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

ಇದೇ ರೀತಿಯ ಘಟನೆ ಕೋಲ್ಕತ್ತಾದ ಜಾದವ್‌ಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಭಂಗರ್ನ ಸತುಲಿಯಾದಲ್ಲಿ ನಡೆದಿದೆ. ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಮತ್ತು ಸಿಪಿಐ (ಎಂ) ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ದಾಳಿ ನಡೆಸಿದ ಆರೋಪ ಮಾಡಲಾಗಿದ್ದು, ಈ ಆರೋಪ ಕೇಳಿ ಬಂದ ಬೆನ್ನಲ್ಲೇ ಹಿಂಸಾಚಾರ ನಡೆದಿದೆ. ಘರ್ಷಣೆಯಲ್ಲಿ ಹಲವಾರು ಐಎಸ್ಎಫ್ ಸದಸ್ಯರು ಗಾಯಗೊಂಡಿದ್ದು, ಸ್ಥಳದಲ್ಲಿ ದೇಶೀಯ ನಿರ್ಮಿತ ಬಾಂಬ್‌ಗಳು ಕೂಡಾ ಇತ್ತು ಎಂದು ಆರೋಪಿಸಲಾಗಿದೆ.

ಹಿಂಸಾಚಾರದ ಬಗ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, “ಇಂದು ಬೆಳಿಗ್ಗೆ 6.40ರ ಸುಮಾರಿಗೆ ಬೆನಿಮಾಧವಪುರ ಎಫ್‌ಪಿ ಶಾಲೆಯ ಬಳಿ ಮೀಸಲು ಇವಿಎಂಗಳು ಮತ್ತು ಕಾಗದಗಳನ್ನು ಸ್ಥಳೀಯ ಗುಂಪು ಲೂಟಿ ಮಾಡಿದೆ. ಸಿಯು, 1 ಬಿಯು, 2 ವಿವಿಪ್ಯಾಟ್ ಯಂತ್ರಗಳನ್ನು ಕೊಳಕ್ಕೆ ಎಸೆಯಲಾಗಿದೆ. ಸೆಕ್ಟರ್ ಅಧಿಕಾರಿ ಎಫ್ಐಆರ್ ದಾಖಲಿಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಣಿಪುರ ಹಿಂಸಾಚಾರ | ಅಸ್ಸಾಂ ಸಿಎಂ ನನಗೆ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು; ಎಸ್‌ಐಟಿ ತಂಡದಲ್ಲಿದ್ದ ಐಪಿಎಸ್‌ ಅಧಿಕಾರಿ ಹೇಳಿಕೆ

“ಸೆಕ್ಟರ್ ವ್ಯಾಪ್ತಿಯ ಎಲ್ಲಾ ಆರು ಬೂತ್‌ಗಳಲ್ಲಿ ಮತದಾನ ಪ್ರಕ್ರಿಯೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೊಸ ಇವಿಎಂ ಮತ್ತು ಕಾಗದಪತ್ರಗಳನ್ನು ಸೆಕ್ಟರ್ ಅಧಿಕಾರಿಗೆ ಒದಗಿಸಲಾಗಿದೆ” ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

7ನೇ ಮತ್ತು ಕೊನೆಯ ಹಂತದ ಲೋಕಸಭೆ ಚುನಾವಣೆಯು ಇಂದು ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು ಒಂಬತ್ತು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಬಹಿರಂಗವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...