ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ ರಾಜ್ಯದಿಂದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ

Date:

ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ ಅವರು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು (ನ.18) ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.

“56,000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ನಾವು ಕೊಡುತ್ತಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಏಕೆ ಕೊಡುತ್ತಿಲ್ಲ? ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ. 15 ಲಕ್ಷದವರೆಗೆ ಶೇ.3 ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಬರುವುದು ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರಿಗೆ ಅನ್ಯಾಯ ಮಾಡಬೇಡಿ, ಇದು ದ್ರೋಹದ ಕೆಲಸ ಎಂದು ಮನವರಿಕೆ ಮಾಡಿ ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ. 2023-24 ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11,595 ಕೋಟಿ ರೂ. ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು? ಇದನ್ನು ನೀವು ಕೇಳುವುದಿಲ್ಲ” ಎಂದು ಕಿಡಿಕಾರಿದರು.

ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್‌ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ಅಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಗ್ಯಾರಂಟಿಗಳ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದಾರಾ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ” ಎಂದರು.

ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ

“ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ” ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು

“ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...