ಕೇಂದ್ರದಿಂದ ರಾಜ್ಯದ ರೈತರಿಗೆ ಏನು ನೆರವು ಸಿಕ್ಕಿದೆ? ಉತ್ತರಿಸುವ ಧಮ್ ಅಶೋಕ್‌ಗೆ ಇದೆಯಾ: ಸಚಿವ ಗುಂಡೂರಾವ್‌

Date:

ವಿಪಕ್ಷ ನಾಯಕ ಅಶೋಕ್ ಅವರು “‘ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ’ ಎಂದು ಹೇಳಿರುವುದಕ್ಕೆ ನಾಚಿಕೆಪಡಬೇಕು. ಇಂತಹ ಭೀಕರ ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ ಹೊರತು, ಇವರು ಕುರುಡಾಗಿ ಆರಾಧಿಸುವ ಮೋದಿಯವರಲ್ಲ” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿ, “ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಹೊರತಾಗಿಯೂ ಬರದಿಂದ ತತ್ತರಿಸುವ ರೈತರಿಗೆ 2 ಸಾವಿರ ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ರೈತರ ನೆರವಿಗಾಗಿ ಕೃಷಿ ಭಾಗ್ಯ ಜಾರಿಗೆ ತಂದಿದೆ. ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಏನು ನೆರವು ಸಿಕ್ಕಿದೆ ಎಂದು ಹೇಳುವ ಧಮ್ ಅಶೋಕ್‌ ಅವರಿಗಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಅಶೋಕ್‌ರವರೆ, ನಾವು ಕೇಂದ್ರದ ಬಳಿ ಬಿಟ್ಟಿ ಕೊಡಿ ಎಂದು ಅಂಗಲಾಚುತ್ತಿಲ್ಲ. ನಮಗೆ ಬರಬೇಕಾದ ತೆರಿಗೆ ಅನುದಾನದ ಪಾಲು, ಬರ ಪರಿಹಾರದ ಪಾಲನ್ನು ಅಧಿಕಾರಯುತವಾಗಿ ಕೇಳುತ್ತಿದ್ದೇವೆ. ಅದು ನಮ್ಮ ನ್ಯಾಯಯುತವಾದ ಬೇಡಿಕೆ ಕೂಡ ಹೌದು. ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಕಳೆದ‌ ಒಂದು ವಾರದಿಂದ ಅನೇಕ ದಿನಪತ್ರಿಕೆಗಳಲ್ಲಿ ಸರಣಿ ವರದಿ ಪ್ರಕಟವಾಗಿದೆ. ಒಂದು ವೇಳೆ ಆ ವರದಿಗಳನ್ನು ನೀವು ಓದಿಲ್ಲವಾದರೆ, ಸಮಯಾವಕಾಶ ಮಾಡಿಕೊಂಡು ಓದಿ. ಆಗ ‘ಗುಳೆ ಭಾಗ್ಯ’ದ ಕೊಡುಗೆ ಯಾರದ್ದೆಂದು ತಿಳಿಯಲಿದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

“ರೈತರ ಬಗ್ಗೆ ಈಗ ಮೊಸಳೆ ಕಣ್ಣೀರು ಸುರಿಸುತ್ತಾ ಸಿದ್ದರಾಮಯ್ಯರ ಮಾನವೀಯತೆಯನ್ನು ಪ್ರಶ್ನಿಸುವ ಅಶೋಕ್‌ರವರಿಗೆ ಇದೇ ಪ್ರಶ್ನೆಯನ್ನು ಮೋದಿಯವರಿಗೆ ಕೇಳಲು ಸಾಧ್ಯವಿದೆಯೇ? ವಾರ್ಷಿಕವಾಗಿ ರೈತರಿಗೆ 6 ಸಾವಿರ ಕೊಡುವುದನ್ನೇ ದೊಡ್ಡ ಸಾಧನೆ ಎಂದು TVಗಳಲ್ಲಿ 24 ಗಂಟೆ ಜಾಹೀರಾತು ಕೊಡುವ ಮೋದಿಯವರು, ಅದೇ ಜಾಹೀರಾತಿಗೆ ಕೊಟ್ಟ ಹಣವನ್ನು ಬರ ಪರಿಹಾರದ ರೂಪದಲ್ಲಿ ಕೊಟ್ಟಿದ್ದರೆ, ರಾಜ್ಯದ ರೈತರು ಇಷ್ಟು ಕಷ್ಟ ಎದುರಿಸಬೇಕಾದ‌ ಪ್ರಮೇಯವೇ ಇರುತ್ತಿರಲಿಲ್ಲ” ಎಂದಿದ್ದಾರೆ.

“ಅಶೋಕ್‌ರವರೆ, ಉತ್ತರ ಕುಮಾರನ ಪೌರುಷ ಒಲೆ ಮುಂದೆ ಎಂಬಂತೆ ನಮ್ಮ ಮುಂದೆ ನಿಮ್ಮ ಪೌರುಷ ತೋರಿಸಬೇಡಿ. ವಿಪಕ್ಷ ನಾಯಕನಂತಹ‌ ಜವಾಬ್ಧಾರಿ ಸ್ಥಾನದಲ್ಲಿದ್ದೀರಿ. ನಿಮಗೇನಾದರೂ ರಾಜ್ಯದ ರೈತರ ಬಗ್ಗೆ ಅನುಕಂಪ, ಕರುಣೆ, ಕಾಳಜಿಯಿದ್ದರೆ ಕೇಂದ್ರದಿಂದ ನಿಯಮಾನುಸಾರ ನಮಗೆ ಬರಬೇಕಾದ ಬರ ಪರಿಹಾರ ಕೊಡಲು ಮೋದಿಯವರಿಗೆ ಹೇಳಿ. ಇಲ್ಲವಾದರೆ ಮೋದಿಯವರ ಎದುರು ಮಾತಾಡಲು ನಿಮಗೆ ಧೈರ್ಯವಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...