ಕೇಜ್ರಿವಾಲ್‌ಗೆ ಏನಾಗಿದೆಯೋ ನಿತೀಶ್, ನಾಯ್ಡುಗೂ ಅದೇ ಆಗಬಹುದು: ಆದಿತ್ಯ ಠಾಕ್ರೆ

Date:

ದೇಶದಲ್ಲಿರುವ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಗುರಿ. ಈಗ ಮಹಾರಾಷ್ಟ್ರದಲ್ಲಿ ನಮಗೆ, ದೆಹಲಿಯಲ್ಲಿ ಕೇಜ್ರಿವಾಲ್‌ಗೆ ಏನಾಗಿಯೋ, ಅದು ಬಿಹಾರದಲ್ಲಿ ನಿತೀಶ್‌ ಕುಮಾರ್ ಮತ್ತು ಆಂಧ್ರದಲ್ಲಿ ಚಂದ್ರಬಾಬು ನಾಯ್ಡುಗೂ ಆಗಬಹುದು ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. “ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಭಾವಿಸಿದ್ದೇವೆ. ಆದರೆ, ಅದು ಇದು ಪ್ರಜಾಪ್ರಭುತ್ವವಲ್ಲ. ನಮಗೆ, ಕೇಜ್ರಿವಾಲ್ ಅವರಿಗೆ ಮತ್ತು ಕಾಂಗ್ರೆಸ್‌ಗೆ ಏನಾಯಿತೋ, ಭವಿಷ್ಯದಲ್ಲಿ ನಿತೀಶ್, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೂ ಆಗಬಹುದು” ಎಂದು ಹೇಳಿದ್ದಾರೆ.

“ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸು. ಇದೇ ಅವರು ಪ್ರಜಾಪ್ರಭುತ್ವಕ್ಕೆ ಕೊಡುತ್ತಿರುವ ಕೊಡುಗೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯಾ ಒಕ್ಕೂಟದ ನಾಯಕರ ಭೇಟಿಯ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಇಂಡಿಯಾ ಒಕ್ಕೂಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸುವ ಅನೇಕ ಹಿರಿಯ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟದ ಜಂಟಿ ನಾಯಕತ್ವವನ್ನು ಹೊಂದಿದೆ. ಒಬ್ಬನೇ ಒಬ್ಬ ನಾಯಕನಲ್ಲ. ಇದು ಅಹಂಕಾರದ ಹೋರಾಟ ಅಥವಾ ಒಬ್ಬರ ಲಾಭಕ್ಕಾಗಿ ಅಲ್ಲ, ಬದಲಾಗಿ ದೇಶದ ಭವಿಷ್ಯಕ್ಕಾಗಿ ಹೋರಾಟ” ಎಂದಿದ್ದಾರೆ.

ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧದ ಹೋರಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.

ಕೆಲ ದಿನಗಳ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಶೇಷವಾಗಿ 2024ರ ಲೋಕಸಭೆ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ನಡುವೆ ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಲೋಕಸಭಾ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ಹೇಳಿದ್ದರು.

ಮತದಾರರ ನೋಂದಣಿ ಅಂಕಿ ಅಂಶಗಳಲ್ಲಿನ ವ್ಯತ್ಯಾಸಗಳನ್ನು ಅವರು ಪ್ರಶ್ನಿಸಿದ್ದರು. ನೋಂದಾಯಿತ ಮತದಾರರ ಸಂಖ್ಯೆ ಮಹಾರಾಷ್ಟ್ರದ ಒಟ್ಟು ವಯಸ್ಕ ಜನಸಂಖ್ಯೆಯನ್ನು ಮೀರಿದೆ ಎಂದು ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...