ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಲು ‘ಸಂವಾದ’ ಫೌಂಡೇಶನ್‌ಗೆ ಏನು ಆಸಕ್ತಿ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Date:

ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಖಾಸಗಿ ಎಫ್‌ಎಸ್‌ಎಲ್‌ ವರದಿ ನನ್ನ ಬಳಿಯೂ ಇದೆ, ಆದರೆ ನಾನು ಅದನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಆಗುತ್ತಾ? ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದ ಬಿಜೆಪಿ ನಡೆ ದೇಶದ್ರೋಹ ನಡೆಯಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹರಿಹಾಯ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, “ಪ್ರಕರಣ ಬಗ್ಗೆ ವರದಿ ಬಿಡುಗಡೆ ಮಾಡಲು ಸಂವಾದ ಫೌಂಡೇಶನ್‌ಗೆ ಏನು ಆಸಕ್ತಿ? ಯಾರವರು? ಸಂವಾದ ಎಂಬುದು ಆರ್‌ಎಸ್‌ಎಸ್‌ನವರ ಭಜನೆ ಮಾಡುವ ಸಂಸ್ಥೆ. ಇದು ಹೇಗೆಲ್ಲಾ ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತದೆ ಎಂಬುದು ಎಲ್ಲರಿಗೂ ತಿಳಿದ ಸಂಗತಿ” ಎಂದು ಕಿಡಿಕಾರಿದರು.

“ನಾನೂ ಖಾಸಗಿ ಸಂಸ್ಥೆಗಳಿಗೆ ಕೊಟ್ಟು ನಾನೂ ರಿಪೋರ್ಟ್ ತೆಗೆದುಕೊಂಡಿದ್ದೇನೆ. ಹಾಗಾದರೆ ನಾನೂ ಅದನ್ನು ಸಾರ್ವಜನಿಕವಾಗಿ ಪಬ್ಲಿಷ್ ಮಾಡಬಹುದಲ್ಲ? ನಾನೂ ಯಾವುದೋ ರಿಪೋರ್ಟ್ ತಂದು ಹೇಳಬಹುದಲ್ಲ? ನಾನೂ ಹಾಗೆ ಮಾಡಿಲ್ಲ. ಅದಕ್ಕೊಂದು ರೀತಿ ನೀತಿ ಇದೆ. ಘಟನೆಗೆ ಸಂಬಂಧಿಸಿದಂತೆ ವಿಡಿಯೋವನ್ನು ಲ್ಯಾಬ್ ಟೆಸ್ಟ್ ಮಾಡುವುದಕ್ಕೆ ಅವರು ಯಾರು” ಎಂದು ಪ್ರಶ್ನಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಗೃಹ ಇಲಾಖೆ ಈ ಬಗ್ಗೆ ವರದಿ ಕೊಡಬೇಕೇ ಹೊರತು ಸಂವಾದ ಫೌಂಡೇಶನ್ ಅಲ್ಲ. ಸರ್ಕಾರ ಪದೇ ಪದೇ ಎಫ್ಎಸ್ಎಲ್ ರಿಪೋರ್ಟ್ ನೋಡುವುದಕ್ಕೆ ಕಾರಣ ಯಾವುದೇ ಗೊಂದಲ ಇರಬಾರದು ಅಂತ. ಇವರು ಯಾವ ಫೂಟೇಜ್ ಕೊಟ್ಟಿದ್ದಾರೋ? ಗೊತ್ತಿಲ್ಲ. ಬಿಜೆಪಿಯವರಿಗೆ ಜವಾಬ್ದಾರಿಯುತ ಪಕ್ಷವಾಗಿ ಸಂವಾದ ಹಾಕಿದ ತಾಳಕ್ಕೆ ಕುಣಿತಾರಲ್ಲ ಇವರಿಗೆ ನಾಚಿಕೆ ಬೇಡವಾ?” ಎಂದು ಕುಟುಕಿದರು.

“ಸಮಾಜದಲ್ಲಿ ಗೊಂದಲ ಇದ್ದಾಗಲೆಲ್ಲ ರಾಜಕೀಯ ಲಾಭ ಬಿಜೆಪಿಗೆ ಆಗುತ್ತದೆ. ಸಂವಾದ ಯಾವತ್ತೂ ದೀಪ ಹಚ್ಚುವ ಕೆಲಸ ಮಾಡಿಲ್ಲ, ಬರೀ ಬೆಂಕಿ ಹಚ್ಚುವ ಕೆಲಸವನ್ನೇ ಮಾಡಿದೆ. ಆ ರಿಪೋರ್ಟ್ ಇಟ್ಟುಕೊಂಡು ಕುಣಿಯುತ್ತಿದ್ದಾರೆ. ಇದರ ಮೇಲೆ ತಿಳಿಯುತ್ತದೆ ಬಿಜೆಪಿಯವರು ಎಷ್ಟು ಹತಾಶರಾಗಿದ್ದಾರೆ ಎಂಬುದು” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...