ವಿಪಕ್ಷ ನಾಯಕನ ಆಯ್ಕೆ ಆಗದಿರಲು ಸಂತೋಷ್-ಬಿಎಸ್‌ವೈ ಆಂತರಿಕ ಯುದ್ಧ ಕಾರಣವೆ: ಕಾಂಗ್ರೆಸ್‌ ಪ್ರಶ್ನೆ

Date:

ವಿಧಾಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಈವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಬಿಜೆಪಿ ತೀವ್ರ ಮುಜುಗರ ಅನುಭವಿಸುತಿದ್ದು, ಅದರ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿಗೆ ಸರಣಿ ಪ್ರಶ್ನೆಗಳನ್ನು ಕೇಳಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ”ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ ಎರಡು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು?” ಎಂದು ಪ್ರಶ್ನಿಸಿದೆ.

“ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ? 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ? ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ? ನಮ್ಮ ಸರ್ಕಾರವನ್ನು ವಿರೋಧಿಸಲು ಸಕಾರಣಗಳು ಸಿಗುವುದಿಲ್ಲ ಎಂಬ ನಿರಾಸೆಯೇ?” ಎಂದು ವ್ಯಂಗ್ಯವಾಡಿದೆ.

“ಸೋಲಿನ ಆಘಾತದಿಂದ ಇನ್ನೂ ಸುಧಾರಿಸಿಕೊಂಡಿಲ್ಲವೇ? ಶಾಸನ ಸಭೆಯ ಪಟ್ಟುಗಳು, ನೀತಿ ನಿಯಮಗಳು ತಿಳಿದಿರುವಂತ ನಾಯಕರ ಕೊರತೆಯೇ? ಸಂತೋಷ್ – ಯಡಿಯೂರಪ್ಪ ಅವರ ಆಂತರಿಕ ಯುದ್ಧದ ಪರಿಣಾಮವೇ? ಕಾರಣವೇನು ಎನ್ನುವುದನ್ನಾದರೂ ರಾಜ್ಯದ ಜನತೆಗೆ ತಿಳಿಸಲಿ” ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...