ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ: ವಿ ಎಸ್ ಉಗ್ರಪ್ಪ ಪ್ರಶ್ನೆ

Date:

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎಸ್‌ಸಿ, ಎಸ್‌ಟಿಯವರ ಮೀಸಲಾತಿ ತೆಗೆಯಬೇಕು ಎಂದು ಅಮೆರಿಕಾದಲ್ಲಿ ಹೇಳಿದ್ದಾರೆ ಎಂದು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಸಂವಾದದ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ ಎಸ್ ಉಗ್ರಪ್ಪ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೋಕುಲಾಷ್ಟಮಿಗೂ ಇಮಾಮ್ ಸಾಬೀಗೂ ಏನು ಸಂಬಂಧ ಎಂದು ಕೇಳುವಂತೆ ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ” ಎಂದು ಪ್ರಶ್ನಿಸಿದರು.

“ಎಲ್ಲ ಹಂತಗಳಲ್ಲೂ ಆರ್‌ಎಸ್‌ಎಸ್‌ ಪ್ರಣೀತ ಮನುವಾದವನ್ನು ತೂರಿಸಲು ಪ್ರಯತ್ನ ಪಡುತ್ತಿದೆ ಬಿಜೆಪಿ. ಆರ್‌ಎಸ್‌ಎಸ್‌ ಎರಡನೇ ಸರಸಂಘ ಚಾಲಕರಾಗಿದ್ದ ಗೋಲವಳ್ಕರ್ ಅವರು ತಮ್ಮ ಬಂಚ್ ಆಫ್ ಥಾಟ್ಸ್ ಪುಸ್ತಕದಲ್ಲಿ ಶ್ರೇಣಿಕೃತ ವ್ಯವಸ್ಥೆ ಇರಬೇಕು ಎಂದು ಪ್ರತಿಪಾದನೆ ಮಾಡಿದ್ದಾರೆ. ಶೋಷಿತ ವರ್ಗದ ಜನರು ಮುಂದುವರೆಯದೆ ಹಾಗೆಯೇ ಇರಬೇಕು ಎಂಬುದು ಬಿಜೆಪಿ ಹಾಗೂ ಸಂಘದ ಚಿಂತನೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ರಚಣೆಯಲ್ಲಿ ಆರ್‌ಎಸ್‌ಎಸ್‌ ಅವರ ಕೊಡುಗೆ ಏನಿದೆ? ಅಂಬೇಡ್ಕರ್ ಅವರ ವಿಚಾರದಲ್ಲಿ ನಂಬಿಕೆಯಿಟ್ಟು ಸಂವಿಧಾನ ಜಾರಿಗೆ ತಂದ ಪಕ್ಷ ಕಾಂಗ್ರೆಸ್. ಬಾಬಾ ಸಾಹೇಬರನ್ನು ಸಂವಿಧಾನ ಕರಡು ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದು ಕಾಂಗ್ರೆಸ್” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುಲ್ಡೋಜರ್‌, ತಲವಾರು ಹೇಳಿಕೆ; ಬಿಜೆಪಿ ಮುಖಂಡರಿಗೆ ಸೌಹಾರ್ದ ಕರ್ನಾಟಕ ಬೇಕಿಲ್ಲವೇ?!

“ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಕಾಯ್ದೆ 1950 ಮೂಲಕ ಮೀಸಲಾತಿ ತಂದಿದ್ದು ಕಾಂಗ್ರೆಸ್ ಸರ್ಕಾರ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದಲು ಮೀಸಲಾತಿ ತರಲು ಮುಂದದಾಗ ಸಮಾಜವನ್ನು ಒಡೆದು ಆಳುವ ನೀತಿಗೆ ನೂಕಬೇಕು ಎಂದು ಪ್ರಯತ್ನಪಟ್ಟಿದ್ದು ಇದೇ ಬಿಜೆಪಿ” ಎಂದು ಆರೋಪಿಸಿದರು.

“ಅನಂತ್ ಕುಮಾರ್ ಹೆಗಡೆ, ಯತ್ನಾಳ್ ಅವರು ಸೇರಿದಂತೆ ಅನೇಕ ಬಿಜೆಪಿ ನಾಯಕರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಕಿತ್ತು ಹಾಕುವುದಾಗಿ ಹೇಳಿದ್ದಾರೆ. ಮೀಸಲಾತಿಯನ್ನು ಮುಂದುವರಿಸಿಕೊಂಡು ಬರುವಂತೆ ಮಾಡಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಎಂದಿಗೂ ಮೀಸಲಾತಿ ಪರವಾಗಿ ಹೋರಾಟ ಮಾಡಿಲ್ಲ. ಅದು ಪರೋಕ್ಷವಾಗಿ ಮೀಸಲಾತಿ ತೆಗೆಯಬೇಕು ಎಂದು ಹುನ್ನಾರ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿ ಅವರು ಅವಕಾಶ ವಂಚಿತರಿಗೆ ಸೌಲಭ್ಯ ಸಿಗಬೇಕು ಎಂದು ಹೇಳಿದ್ದಾರೆ. ಸರ್ವರಿಗೂ ಸಮಪಾಲು, ಸಮಬಾಳು ಸೇರಿದಂತೆ ಎಲ್ಲ ರೀತಿಯ ಹಕ್ಕು ಸಿಗಬೇಕು ಎಂದು ಹೇಳುತ್ತಾ ಇದ್ದಾರೆ. ಬಡವರ, ದಲಿತರ ವಿರೋಧಿ ಪಕ್ಷ ಯಾವುದಾದರು ಇದ್ದರೆ ಅದು ಬಿಜೆಪಿ ಮಾತ್ರ. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿರುವ ಬಿಜೆಪಿ ಅವರ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...