ಬಿಜೆಪಿ ಸದನದಲ್ಲಿ ಜನರ ಸಮಸ್ಯೆ ಚರ್ಚಿಸದೆ ಹೊರಗೆ ಹೋರಾಟ ಮಾಡಿದರೇನು ಪ್ರಯೋಜನ:‌ ಡಿಕೆ ಪ್ರಶ್ನೆ

Date:

ರಾಜ್ಯದ ಜನ 65 ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿರುವುದು ವಿಧಾನಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದು. ಆದರೆ ಇವರು ಸದನದಲ್ಲಿ ಚರ್ಚೆ ಮಾಡದೇ ಹೊರಗೆ ಹೋರಾಟ ಮಾಡಿದರೆ ಏನು ಪ್ರಯೋಜನ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ‌ ನೀಡಿದ ಅವರು, “ಬಿಜೆಪಿಯವರ‌ ನಡವಳಿಕೆಯಿಂದ ಅವರ ಪಕ್ಷದಲ್ಲಿ ಒಮ್ಮತವಿಲ್ಲ‌ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ಹೇಳಿದರು.

“ಬಿಜೆಪಿ ಆರ್. ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷರೂ ವಿಧಾನಸಭೆಯಲ್ಲಿ ಇದ್ದಾರೆ. ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸುವರ್ಣಸೌಧ ಕಟ್ಟಿಸಿರುವುದು ಉತ್ತರ ಕರ್ನಾಟಕದ ಸಮಸ್ಯೆಗಳು, ಬರ ಪರಿಸ್ಥಿತಿ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು. ಅವರ ಆಚಾರ, ವಿಚಾರ, ಜನಪರ ಧ್ವನಿಯನ್ನು ಸದನದಲ್ಲಿ ವ್ಯಕ್ತಪಡಿಸಬೇಕು. ಅದನ್ನು ಬಿಟ್ಟು ಹೊರಗೆ ಹೋರಾಟ ಮಾಡುತ್ತೇನೆ ಎಂದರೆ ಯಾರು‌ ಕೇಳುತ್ತಾರೆ? ಅದರಿಂದ ಏನು ಪ್ರಯೋಜನ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಡಿಯೂರಪ್ಪ ಅವರು ಸಹ ಯಾವುದಾದರೂ ಕ್ಷೇತ್ರ ಆಯ್ಕೆ ಮಾಡಿಕೊಂಡು, ಸದನಕ್ಕೆ‌ ಬಂದು‌ ಮಾತನಾಡಲಿ. ನಮಗೆ ಯಾವುದೇ ಅಭ್ಯಂತರವಿಲ್ಲ. ಬಿಜೆಪಿ ಪಕ್ಷದಲ್ಲಿನ ಸಮನ್ವಯತೆ ಕೊರತೆ, ಆ ಪಕ್ಷದ ದೌರ್ಬಲ್ಯ ಮತ್ತು ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...