ವಂಶ ರಾಜಕಾರಣ ಆರೋಪಕ್ಕೆ ತಿರುಗೇಟು ನೀಡಿದ ರಾಹುಲ್ ಗಾಂಧಿ

Date:

ವಂಶ ರಾಜಕಾರಣ ಆರೋಪಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದು,ಬಿಜೆಪಿ ನಾಯಕರ ಮಂತ್ರಿಗಳು ಹೊಂದಿರುವ ರಾಜಕೀಯ ಸ್ಥಾನಮಾನದ ಬಗ್ಗೆ ಪ್ರಶ್ನಿಸಿದ್ದಾರೆ.

ಮಿಜೋರಾಂನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ವಂಶ ರಾಜಕಾರಣವನ್ನು ಪ್ರಶ್ನಿಸುವ ಬಿಜೆಪಿ ನಾಯಕರು ಅಮಿತ್ ಶಾ ಅವರ ಮಗ ನಿಜವಾಗಿ ಏನು ಮಾಡುತ್ತಿದ್ದಾನೆ ಎಂದು ಕೇಳಬೇಕು. ಬಿಸಿಸಿಐ ಕಾರ್ಯದರ್ಶಿ ಹುದ್ದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರೂ ಆಗಿದ್ದಾರೆ ಎಂದರು.

“ಅಮಿತ್ ಶಾ ಅವರ ಮಗ ಏನು ಮಾಡುತ್ತಿದ್ದಾರೆ? ರಾಜನಾಥ್ ಸಿಂಗ್ ಅವರ ಮಗ ಏನು ಮಾಡುತ್ತಾರೆ? ಕೊನೆಯದಾಗಿ ನಾನು ಹೇಳುತ್ತೇನೆ, ಅಮಿತ್ ಶಾ ಅವರ ಮಗ ಭಾರತೀಯ ಕ್ರಿಕೆಟ್ ಅನ್ನು ನಡೆಸುತ್ತಿದ್ದಾರೆ. ದಯವಿಟ್ಟು ಪ್ರಮಾಣಿಕರಾಗಿರಿ. ಬಿಜೆಪಿಯನ್ನು ನೋಡಿ, ಅನುರಾಗ್ ಠಾಕೂರ್ ಅವರಂತಹ ಅನೇಕರು ವಂಶ ರಾಜಕಾರಣದಿಂದ ಬಂದವರು ಅಲ್ಲವೇ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 4 ವರ್ಷಗಳ ನಂತರ ಜಾರ್ಖಂಡ್ ವಿಧಾನಸಭೆಗೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ

“ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಮತ್ತು ಝೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಜೆಡ್‌ಪಿಎಂ) ಆಡಳಿತವು ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಈಶಾನ್ಯ ರಾಜ್ಯವನ್ನು ಪ್ರವೇಶಿಸಲು ಪ್ರಮುಖ ಮಾರ್ಗವಾಗಿದೆ. ನಾವು ಎಂದಿಗೂ ಕೋಮುವಾದಿಗಳನ್ನು ಪ್ರವೇಶಿಸಲು ಬಿಡುವುದಿಲ್ಲ. ಮಿಜೋರಾಂ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಎಲ್ಲ ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ”  ಎಂದು ರಾಹುಲ್ ಗಾಂಧಿ ಹೇಳಿದರು.

ನವೆಂಬರ್ 7 ರಂದು ನಿಗದಿಯಾಗಿರುವ ಮಿಜೋರಾಂ ವಿಧಾನಸಭಾ ಚುನಾವಣೆಗೆ 39 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

2018 ರ ಚುನಾವಣೆಯಲ್ಲಿ, ಮಿಜೋ ನ್ಯಾಷನಲ್ ಫ್ರಂಟ್ 37.8 ಶೇಕಡಾ ಮತಗಳೊಂದಿಗೆ 26 ಸ್ಥಾನಗಳನ್ನು ಗಳಿಸಿದರೆ, ಕಾಂಗ್ರೆಸ್ ಐದು ಮತ್ತು ಬಿಜೆಪಿ ಒಂದು ಸ್ಥಾನ ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...