ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ ʼಹೆಲ್ಪ್ ಲೈನ್ʼ ಯಾವಾಗ: ಕಾಂಗ್ರೆಸ್ ಪ್ರಶ್ನೆ

Date:

  • ಯುವತಿಯೊಂದಿಗೆ ಎಬಿವಿಪಿ ಅಧ್ಯಕ್ಷನ ಅನುಚಿತ ವರ್ತನೆ
  • ಬಿಜೆಪಿ ವಿರುದ್ಧ ಟ್ವೀಟ್ ಪ್ರಹಾರ ನಡೆಸಿದ ರಾಜ್ಯ ಕಾಂಗ್ರೆಸ್

ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ “ಹೆಲ್ಪ್ ಲೈನ್” ಯಾವಾಗ ಸ್ಥಾಪಿಸುತ್ತೀರಾ ಎನ್ನುವ ಪ್ರಶ್ನೆಯನ್ನು ಕಾಂಗ್ರೆಸ್‌ ವಿಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಶಿವಮೊಗ್ಗದಲ್ಲಿ ತೀರ್ಥಹಳ್ಳಿಯಲ್ಲಿ ಕಾಲೇಜ್‌ ಒಂದರಲ್ಲಿ ನಡೆದಿದೆ ಎನ್ನಲಾದ ಹುಡುಗಿಯೊಂದಿಗಿನ ಅಸಭ್ಯ ವರ್ತನೆ ವಿಡಿಯೋ ವಿಚಾರವಾಗಿ ರಾಜ್ಯ ಕಾಂಗ್ರೆಸ್ ವಿಪಕ್ಷ ಬಿಜೆಪಿ ಹಾಗೂ ಸಂಸದ ತೇಜಸ್ವಿ ಸೂರ್ಯರನ್ನು ತರಾಟೆಗೆತ್ತಿಕೊಂಡಿದೆ.

ಶಿಸ್ತಿನ ಪಕ್ಷ ಹಾಗೂ ಅಖಿಲ ಭಾರತ ವಿಧ್ಯಾರ್ಥಿ ಪರಿಷತ್‌ನ ಶಿವಮೊಗ್ಗ(ತೀರ್ಥಹಳ್ಳಿ) ವಿಭಾಗಾಧ್ಯಕ್ಷನೋರ್ವ ಹೆಣ್ಣುಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದೇ ನಾ ನಿಮ್ಮ ಪಕ್ಷ ಹಾಗೂ ಸಂಘಟನೆ ಹೇಳಿಕೊಡುವ ಶಿಸ್ತು ನೀತಿ ಎಂದು ಪ್ರಶ್ನಿಸಿದೆ. ಟ್ವೀಟ್ ಮೂಲಕ ಘಟನೆ ಪ್ರಸ್ತಾಪಿಸಿರುವ ಕಾಂಗ್ರೆಸ್ ತೇಜಸ್ವಿ ಸೂರ್ಯರನ್ನು ಕುಟುಕಿದೆ. ಕಾಂಗ್ರೆಸ್ ಟ್ವೀಟ್ ಈ ಕೆಳಗಿನಂತಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಬಿವಿಪಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬನ ಕರ್ಮಕಾಂಡ ಬಯಲಾಗಿದೆ.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್‌ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಸಂಘದ ಶಾಖೆಯಲ್ಲಿ ಹೇಳುವ ಧರ್ಮ ರಕ್ಷಣೆಯ ಪಾಠ ಇದೇನಾ ಎಂದು ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಜೊತೆಗೆ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿರುವ ಕಾಂಗ್ರೆಸ್ ಬಿಜೆಪಿ ಕಾಮಣ್ಣರಿಂದ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ “ಹೆಲ್ಪ್ ಲೈನ್” ಯಾವಾಗ ಆರಂಭಿಸುವಿರಿ ಎಂದು ಕುಟುಕಿದೆ.

ವಾರದ ಹಿಂದಷ್ಟೆ ಹಿಂದೂ ಕಾರ್ಯಕರ್ತರ ರಕ್ಷಣೆ ಸಲುವಾಗಿ ಬಿಜೆಪಿ ಕಾನೂನು ಮೋರ್ಚಾ ಕಾನೂನು ಸಲಹೆಗಾಗಿ ಹೆಲ್ಪ್‌ಲೈನ್ ಆರಂಭಿಸಿತ್ತು. ಸಂಸದ ತೇಜಸ್ವಿ ಸೂರ್ಯ ಇದನ್ನು ಉದ್ಘಾಟಿಸಿ, ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...