ಮಾಜಿ ರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲಿದ್ದಾರೆ: ಅಮಿತ್ ಶಾಗೆ ಪತ್ರ ಬರೆದ ಸಂಜಯ್ ರಾವತ್

Date:

ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಮಾಜಿ ಉಪಾಧ್ಯಕ್ಷ ಜಗದೀಪ್ ಧನಕರ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಸ್ಥಳದ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ಜುಲೈ 21ರಂದು ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದು ಧನಕರ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಅಚ್ಚರಿಯ ಬೆಳವಣಿಗೆಯು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದಾದ ಬಳಿಕ ಧನಕರ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಾಜಿ ಪ್ರಧಾನಿ ವಾಜಪೇಯಿ ಎರಡನೇ ನೆಹರೂ:‌ ಸಂಸದ ಸಂಜಯ್ ರಾವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ (ಮಾಜಿ) ಉಪಾಧ್ಯಕ್ಷರು ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ. ಅವರ ಪ್ರಸ್ತುತ ಯಾವ ಸ್ಥಳದಲ್ಲಿದ್ದಾರೆ? ಅವರ ಆರೋಗ್ಯ ಹೇಗಿದೆ? ಈ ವಿಷಯಗಳ ಬಗ್ಗೆ ಸ್ಪಷ್ಟತೆ ಇಲ್ಲ. ರಾಜ್ಯಸಭೆಯ ಕೆಲವು ಸದಸ್ಯರು ಧನಕರ್ ಅವರನ್ನು ಸಂಪರ್ಕಿಸುವ ಯತ್ನ ಮಾಡಿದ್ದಾರೆ. ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ” ಎಂದು ಆಗಸ್ಟ್ 10ರಂದು ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಸಂಜಯ್ ರಾವತ್ ಹೇಳಿದ್ದಾರೆ.

ಸೋಮವಾರ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾವತ್, ಧನಕರ್ ಅವರು ಸುರಕ್ಷಿತವಾಗಿಲ್ಲ ಎಂಬ ವದಂತಿಗಳು ದೆಹಲಿಯಲ್ಲಿ ಹರಡುತ್ತಿದೆ ಎಂದಿದ್ದಾರೆ. “ಧನಕರ್ ಅಥವಾ ಅವರ ಸಿಬ್ಬಂದಿ ಜೊತೆಗೆ ಯಾವುದೇ ಮಾತುಕತೆ ನಡೆದಿಲ್ಲ. ಇದು ಗಂಭೀರ ಕಳವಳಕಾರಿಯಾದ ವಿಷಯವಾಗಿದೆ” ಎಂದಿದ್ದಾರೆ.

ಇನ್ನು ಕಳೆದ ವಾರ ಗುರುವಾರ ಉಪರಾಷ್ಟ್ರಪತಿ ಎಲ್ಲಿದ್ದಾರೆ? ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಶಿವಸೇನೆ ನಾಯಕ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದರು. ಇನ್ನು ಮೇಲ್ಮನೆಯ ತಮ್ಮ ಕೆಲವು ಸಹೋದ್ಯೋಗಿಗಳು ಧನಕರ್ ಬಗ್ಗೆ ನಿಜವಾಗಿಯೂ ಚಿಂತಿತರಾಗಿದ್ದಾರೆ. ಆದ್ದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಯನ್ನು ಸಲ್ಲಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...