ಹೆಣ ಕಂಡರೆ ಬೊಬ್ಬೆ ಹೊಡೆಯುವ ಬಿಜೆಪಿ, ಕಾರ್ಯಕರ್ತರು ಅಕ್ರಮ ನಡೆಸಿದಾಗ ಜಾರಿಕೊಳ್ಳುವುದೇಕೆ? ಕಾಂಗ್ರೆಸ್

Date:

  • ವಂಚನೆ ಪ್ರಕರಣದ ಎ1 ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆ ಎಂದ ಕಾಂಗ್ರೆಸ್
  • ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಬಿಜೆಪಿಯವರ ಆತ್ಮವಂಚನೆ ಅಲ್ಲವೇ?

ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, ಬೊಮ್ಮಾಯಿಯವರು ಟಿಕೆಟ್ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ. ಯಾವುದಾದರೂ ಹೆಣ ಕಂಡರೆ ಹಿಂದೂ ಕಾರ್ಯಕರ್ತರು ಎಂದು ಬೊಬ್ಬೆ ಹೊಡೆಯುವ ಬಿಜೆಪಿ, ತನ್ನ ಕಾರ್ಯಕರ್ತರು ಅಕ್ರಮ, ಅನಾಚಾರ ನಡೆಸಿದಾಗ ಜಾರಿಕೊಳ್ಳುವುದೇಕೆ? ಎಂದು ಬಿಜೆಪಿಗೆ ಪ್ರಶ್ನೆ ಹಾಕಿದೆ.

ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆಯಾಗಿದ್ದಾಳೆ. ಮತ್ತೊಬ್ಬ ಆರೋಪಿ ಗಗನ್ ಕಡೂರು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ. ವಂಚನೆ ನಡೆಸಿದ್ದು ಬಿಜೆಪಿ ಟಿಕೆಟ್ ಹೆಸರಲ್ಲಿ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಡೀಲ್ ನಡೆಸಲು ಬಳಸಿಕೊಳ್ಳಲಾಗಿತ್ತು ಎಂದಿರುವ ಕಾಂಗ್ರೆಸ್, ಹೀಗಿದ್ದೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಬಿಜೆಪಿಯವರ ಆತ್ಮವಂಚನೆ ಅಲ್ಲವೇ ಎಂದು ಕಾಲೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...