ಭಾರತದ ಪ್ರತೀಕಾರಕ್ಕೆ ತಡೆ ಯಾಕೆ, ಅಮೆರಿಕದ ದ್ವಂದ್ವ ನೀತಿ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ

Date:

ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಬಗ್ಗೆ ಬಹು ಭಾಷಾ ನಟ ಪ್ರಕಾಶ್ ರಾಜ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಮೆರಿಕದ ದ್ವಂದ್ವ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಕೊಲ್ಲುವ ಮೂಲಕ ಅಮೆರಿಕ ನ್ಯಾಯ ದೊರಕಿಸಿಕೊಂಡಿತ್ತು. ಆದರೆ, ನಾವು ಹಾಗೆ ಮಾಡಲು ಹೊರಟಾಗ ‘ಕದನ ವಿರಾಮ ಘೋಷಿಸಲಾಯಿತು’ ಎಂದಿದ್ದಾರೆ.

“ಪ್ರಿಯ ಸರ್ವೋಚ್ಚ ನಾಯಕರೇ, ಆಶ್ರಯ ಪಡೆದಿದ್ದ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್‌ನನ್ನು ಕೊಲ್ಲಲು ಅಮೆರಿಕ ಪಾಕಿಸ್ತಾನವನ್ನು ಪ್ರವೇಶಿಸಿದಾಗ ನಿಮಗೆ ನ್ಯಾಯ ದೊರಕಿತು. ಆದರೆ ಭಾರತ ಪ್ರತಿಕಾರವನ್ನು ನೀವು ಯಾಕೆ ನಿಲ್ಲಿಸಿದ್ದೀರಿ? ನೀವು ಯಾವ ಷರತ್ತುಗಳ ಮೇಲೆ ಕದನ ವಿರಾಮ ಒಪ್ಪಿಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಹಲ್ಗಾಮ್ ಉಗ್ರರ ದಾಳಿಯಲ್ಲಿ 22 ಭಾರತೀಯರು ಮೃತಪಟ್ಟಿದ್ದರು. ಪಹಲ್ಗಾಮ್‌ ಉಗ್ರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಚರಣೆಯನ್ನು ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡಿದೆ. ಇದರಿಂದ ಎರಡೂ ದೇಶಗಳ ನಡುವೆ ಸಂಘರ್ಷ ಉದ್ವಿಗ್ನಗೊಂಡಿದೆ.

ಅಮೆರಿಕ ಮಧ್ಯಸ್ಥಿಕೆಯಲ್ಲಿ ಶನಿವಾರ ನಡೆದ ಉಭಯ ರಾಷ್ಟ್ರಗಳ ಮಿಲಿಟರಿ ನಾಯಕರ ಸಭೆ ನಂತರ ಕದನ ವಿರಾಮ ಘೋಷಿಸಲಾಯಿತು. ಆದರೀಗ, ಭಾರತೀಯ ವಾಯುಪಡೆ(ಐಎಎಫ್​) ಮಾಹಿತಿ ನೀಡಿದ್ದು, “ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು” ಎಂದು ತಿಳಿಸಿದೆ.

ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು. ಆದರೆ ಶನಿವಾರ ರಾತ್ರಿ ಪಾಕಿಸ್ತಾನ ಮತ್ತೆ ಡ್ರೋನ್‌ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಈಗ ವಾಯುಸೇನೆ ಆಪರೇಷನ್‌ ಸಿಂಧೂರ್‌ ಮುಂದುವರಿಯಲಿದೆ ಎಂದು ಅಧಿಕೃತವಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...