ಕುಮಾರಸ್ವಾಮಿ ಮೇಕೆದಾಟುಗೆ ಅನುಮತಿ ಕೊಡಿಸುತ್ತಿಲ್ಲ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ತಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ್ಯಾರೂ ಪ್ರಶ್ನಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ” ಎಂದು ವಾಗ್ದಾಳಿ ನಡೆಸಿದರು.

“ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡ್ತಾ ಇದ್ದೀವಿ. ಆದರೆ ವಾಪಾಸ್ ನಮಗೆ ಬರುತ್ತಿರುವುದು 60ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಾಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

“ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ” ಎಂದು ಸಿದ್ದರಾಮಯ್ಯ ನುಡಿದರು.

“ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ. ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ” ಎಂದರು.

“ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲನ್ನು ನಮ್ಮ ಸರ್ಕಾರ ಸ್ವೀಕರಿಸಿ ಯಶಸ್ವಿಯಾಗಿ ನಿಭಾಯಿಸುತ್ತೇವೆ. ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 MLD ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗತ್ತೆ. ಇದನ್ನೂ ನಾವು ಘೋಷಿಸಿದ್ದೀವಿ. ನಾವು ಇದನ್ನೂ ಮಾಡಿ ತೋರಿಸುತ್ತೇವೆ” ಎಂದು ಭರವಸೆ ನೀಡಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...