ದೇಶ ಸ್ವಾತಂತ್ರ್ಯಗೊಂಡು 79 ವರ್ಷಗಳ ಬಳಿಕ ‘ವಂದೇ ಮಾತರಂ’ ಚರ್ಚೆ ಅಗತ್ಯವೇನು?: ಪ್ರಿಯಾಂಕಾ ಗಾಂಧಿ

Date:

‘ವಂದೇ ಮಾತರಂ’ ಗೀತೆಯ ಕುರಿತು ಸಂಸತ್‌ನಲ್ಲಿ ಚರ್ಚೆಗಳು ನಡೆಯುತ್ತಿವೆ. ಲೋಕಸಭೆಯಲ್ಲಿ ಚರ್ಚೆಯನ್ನು ಪ್ರಶ್ನಿಸಿರುವ ಸಂಸದೆ ಪ್ರಿಯಾಂಕಾ ಗಾಂಧಿ, “ಭಾರತ ಸ್ವಾತಂತ್ರ್ಯಗೊಂಡು 9 ವರ್ಷಗಳು ಕಳೆದಿವೆ. ಈಗ, ವಂದೇಮಾತರಂ ಕುರಿತು ಚರ್ಚೆಯ ಅಗತ್ಯವೇನಿತ್ತು?” ಎಂದಿದ್ದಾರೆ.

ವಂದೇ ಮಾತರಂ ಗೀತೆ ರಚನೆಯಾಗಿ 150ನೇ ವರ್ಷಗಳು ಕಳೆದಿರುವ ಹಿನ್ನೆಲೆ ಕೇಂದ್ರ ಸರ್ಕಾರವು ‘ವಂದೇ ಮಾತರಂ’ ಕುರಿತು ಚರ್ಚೆ ನಡೆಸುತ್ತಿದೆ. ಆದಾಗ್ಯೂ, ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಚರ್ಚೆಯನ್ನು ಮುನ್ನೆಲೆಗೆ ತಂದಿದೆ ಎಂಬ ಆರೋಪಗಳಿವೆ.

ಲೋಕಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳು ಕಳೆದಿರುವಾಗ, ಚರ್ಚಿಸಲು ಅನೇಕ ಮಹತ್ವದ ವಿಷಯಗಳಿವೆ. ಆದರೆ, ಸದನವು ರಾಷ್ಟ್ರೀಯ ಗೀತೆಯ ಬಗ್ಗೆ ಏಕೆ ಚರ್ಚೆ ನಡೆಸುತ್ತಿದೆ. ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ‘ವಂದೇ ಮಾತರಂ’ ಹೇಳಿದಾಗ ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ. ಈ ಹಾಡು ಜನರ ಹೃದಯದಲ್ಲಿ ಸ್ಥಾನ ಪಡೆದಿದೆ. ಹಾಗಾದರೆ ಚರ್ಚೆಯ ಅಗತ್ಯವೇನು” ಎಂದು ಕೇಳಿದ್ದಾರೆ.

“ನಮ್ಮ ಉದ್ದೇಶವೇನು, ಜನರ ಬಗ್ಗೆ ನಮ್ಮ ಹೊಣೆಗಾರಿಕೆ ಏನು? ನಾವು ಅದನ್ನು ಹೇಗೆ ಪೂರೈಸುತ್ತಿದ್ದೇವೆ. ರಾಷ್ಟ್ರಗೀತೆಯ ಬಗ್ಗೆ ಏಕೆ ಚರ್ಚೆ ನಡೆಸುತ್ತಿದ್ದೇವೆ? ಅದರ ಬಗ್ಗೆ ಏನು ಚರ್ಚೆಯಾಗಬಹುದು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...