ಆರ್ ಅಶೋಕ್‌ಗೆ ನಮ್ಮ ಪಕ್ಷದ ಉಸಾಬರಿ ಯಾಕೆ: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

Date:

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ಅವರಿಗೆ ನಮ್ಮ ಪಕ್ಷದ ಉಸಾಬರಿ ಯಾಕೆ? ಅವರ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಮೊದಲು ಅದನ್ನು ಸರಿಪಡಿಕೊಂಡು ಮಾತನಾಡಲಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್‌ ಅಶೋಕ್‌ ಎಲ್ಲದಕ್ಕೂ ಪ್ರತಿಕ್ರಿಯಿಸಲು ಹೋಗುತ್ತಾರೆ. ಮೊದಲು ತಮ್ಮ ಪಕ್ಷದ ಒಳ ಬೇಗುದಿಯನ್ನು ಸರಿಪಡಿಸಿಕೊಳ್ಳಲಿ” ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಅಮೆರಿಕಾ ಪ್ರವಾಸ ಬಗ್ಗೆ ಮಾತನಾಡಿ, “ಡಿ ಕೆ ಶಿವಕುಮಾರ್‌ ಅವರು ಸರ್ಕಾರದ ಕೆಲಸದ ಮೇಲೆ ಅಮೆರಿಕ ಹೋಗಿಲ್ಲ. ಅವರ ಕುಟುಂಬ ಸದಸ್ಯರ ಜೊತೆ ಹೋಗಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಮಾಧ್ಯಮಗಳು ಇಲ್ಲದ ಬಣ್ಣ ಹಚ್ಚುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಾನು ಒಂದಲ್ಲಾ ಒಂದು ದಿನ ಮುಖ್ಯಮಂತ್ರಿಯಾಗುವೆ’ ಎಂಬ ಸಚಿವ ಎಂ ಬಿ ಪಾಟೀಲ್‌ ಹೇಳಿಕೆ ವಿಚಾರವಾಗಿ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಅಪ್ರಸ್ತುತ. ಮುಡಾ ಪ್ರಕರಣ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸೋಮವಾರ ಕೂಡ ವಾದ, ಪ್ರತಿವಾದ ನಡೆಯಲಿದೆ. 12ನೇ ತಾರೀಖಿಗೆ ತೀರ್ಪು ಬರಲಿದೆ. ಮುಖ್ಯಮಂತ್ರಿ ಚರ್ಚೆಯನ್ನೇ ಪ್ರಾರಂಭಿಸುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

“ಸಚಿವ ಸತೀಶ್‌ ಜಾರಕಿಹೊಳಿ ಭೇಟಿಗೆ ಸುಮ್ಮನೇ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತಿದೆ. ನಮ್ಮ ಮಧ್ಯ ಯಾವ ವಿಚಾರಗಳ ಚರ್ಚೆ ನಡೆದಿಲ್ಲ. ನೀವೇ (ಮಾಧ್ಯಮದವರು) ಇಲ್ಲದ ಕಥೆ ಕಟ್ಟಬೇಡಿ” ಎಂದು ಸ್ಪಷ್ಟಪಡಿಸಿದರು.

ನಟ ದರ್ಶನ್‌ ವಿಚಾರವಾಗಿ ಮಾತನಾಡಿ, “ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ. ಈ ಬಗ್ಗೆ ನ್ಯಾಯಾಲಯವೇ ತೀರ್ಪು ಕೊಡಲಿದೆ. ನಾವು ನೀವು ಮಾತನಾಡುವುದು ಅನವಶ್ಯಕ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...