ನಿವೃತ್ತಿಗೂ ಮುನ್ನ ನ್ಯಾಯಮೂರ್ತಿಗಳು ‘ಸಿಕ್ಸರ್ ಮೇಲೆ ಸಿಕ್ಸರ್’ ಹೊಡೆಯುತ್ತಾರೆ: ಜಡ್ಜ್‌ಗಳ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕಳವಳ

Date:

ನಿವೃತ್ತಿಗೂ ಮುನ್ನ ನ್ಯಾಯಮೂರ್ತಿಗಳು ಆತುರದಿಂದ ಸರಣಿ ತೀರ್ಪುಗಳನ್ನು ಅಥವಾ ಆದೇಶಗಳನ್ನು ನೀಡುವುದರ ಬಗ್ಗೆ ಈ ಹಿಂದೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದವು. ಈ ನ್ಯಾಯಮೂರ್ತಿಗಳು ನಿವೃತ್ತಿ ಪಡೆದು ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳುವುದೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸುಪ್ರೀಂ ಕೋರ್ಟ್‌ ಕೂಡಾ ಜಡ್ಜ್‌ಗಳ ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಪ್ರವೃತ್ತಿಯನ್ನು ಕ್ರಿಕೆಟ್ ಪಂದ್ಯದ ಕೊನೆಯ ಓವರ್‌ನಲ್ಲಿ ಬ್ಯಾಟರ್‌ಗಳು ‘ಸಿಕ್ಸರ್‌ಗಳನ್ನು ಹೊಡೆಯುವುದಕ್ಕೆ’ ಹೋಲಿಸಿದೆ.

ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ತಮ್ಮ ನಿವೃತ್ತಿಗೆ ಕೇವಲ 10 ದಿನಗಳ ಮೊದಲು ನೀಡಿದ ಕೆಲವು ವಿವಾದಾಸ್ಪದ ಆದೇಶಗಳ ಹಿನ್ನೆಲೆಯಲ್ಲಿ ಹೈಕೋರ್ಟ್ ಅವರನ್ನು ಅಮಾನತುಗೊಳಿಸಿತ್ತು. ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜಾರಾಮ್ ಭಾರ್ತಿಯಾ ಅವರು ತಮ್ಮ ಅಮಾನತನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಅವಲೋಕನ ಮಾಡಿದೆ.

ಇದನ್ನು ಓದಿದ್ದೀರಾ? ಕೋರ್ಟ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ: ಸುಪ್ರೀಂ ಕೋರ್ಟ್ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿಗಳು ನಿವೃತ್ತಿಗೂ ಕೆಲವೇ ದಿನಗಳ ಮೊದಲು ಸರಣಿ ಆದೇಶಗಳನ್ನು ಹೊರಡಿಸುವುದನ್ನು ‘ದುರದೃಷ್ಟಕರ ಪ್ರವೃತ್ತಿ’ ಎಂದು ಕರೆದಿರುವ ಸುಪ್ರೀಂ ಕೋರ್ಟ್ ಪೀಠ, “ನಿವೃತ್ತಿಯ ಹೊತ್ತಿನಲ್ಲಿ ನೀಡಲಾಗುವ ಇಂತಹ ತೀರ್ಪುಗಳು ನ್ಯಾಯಾಂಗದ ಪ್ರಾಮಾಣಿಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ” ಎಂದು ಹೇಳಿದೆ.

ಹಾಗೆಯೇ ಬಾಹ್ಯ ಕಾರಣಗಳು ಅಥವಾ ಪ್ರಭಾವಕ್ಕೆ ಒಳಗಾಗಿ ನಿವೃತ್ತಿಯ ಮುನ್ನ ವಿವಾದಾಸ್ಪದ ಆದೇಶಗಳನ್ನು ನೀಡುವ ನ್ಯಾಯಮೂರ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ನ್ಯಾಯಾಂಗದ ಘನತೆಯನ್ನು ಕಾಪಾಡಲು ಇಂತಹ ಆತುರದ ಆದೇಶಗಳ ಮೇಲೆ ನಿಗಾ ಇಡುವುದು ಅಗತ್ಯ ಎಂದು ಪೀಠವು ಪ್ರತಿಪಾದಿಸಿದೆ.

ಇನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಕಳವಳವು ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳ ಹಲವು ಪ್ರಶ್ನೆಗಳನ್ನು ಎತ್ತಿವೆ, ಪ್ರತಿಕ್ರಿಯೆಗಳನ್ನು ನೀಡಿವೆ. ನ್ಯಾಯಮೂರ್ತಿಗಳು ತಮ್ಮ ನಿವೃತ್ತಿಯ ಮುನ್ನ ಸರ್ಕಾರದ ಪರವಾಗಿ ಅಥವಾ ವಿವಾದಾತ್ಮಕ ಆದೇಶಗಳನ್ನು ನೀಡುವುದು ನ್ಯಾಯಾಂಗದ ಸ್ವತಂತ್ರ ಅಸ್ತಿತ್ವಕ್ಕೆ ಧಕ್ಕೆ ತರುತ್ತದೆ ಎಂದು ವಿಪಕ್ಷಗಳು ಹೇಳಿವೆ.

ನಿವೃತ್ತಿಗೂ ಮುನ್ನ ಆತುರದಿಂದ ಆದೇಶಗಳನ್ನು ನೀಡುವುದು ನಿವೃತ್ತಿ ನಂತರ ಸರ್ಕಾರದಿಂದ ಹುದ್ದೆಗಳು ಅಥವಾ ರಾಜಕೀಯ ಸ್ಥಾನಮಾನ ಪಡೆಯಲು ಈ ರೀತಿ ಆತುರದಿಂದ ತೀರ್ಪು ನೀಡುವುದೇ ಎಂದು ವಿಪಕ್ಷಗಳು ಸಂಶಯವನ್ನು ವ್ಯಕ್ತಪಡಿಸಿವೆ. ಹಾಗೆಯೇ ಈ ಸರಣಿ ಆದೇಶಗಳ ಹಿಂದೆ ಬಾಹ್ಯ ಪ್ರಭಾವ ಅಥವಾ ಅಕ್ರಮ ವ್ಯವಹಾರಗಳು ಇರಬಹುದೇ ಎಂಬ ಬಗ್ಗೆ ತನಿಖೆಯ ಅಗತ್ಯವಿದೆ ಎಂದೂ ಕೆಲವು ನಾಯಕರುಗಳು ಒತ್ತಾಯಿಸಿದ್ದಾರೆ.

ಸಾಮಾನ್ಯವಾಗಿ ನ್ಯಾಯಾಮೂರ್ತಿಗಳು ನಿವೃತ್ತಿಯಾದ ನಂತರ ಸರ್ಕಾರಿ ಹುದ್ದೆಗಳನ್ನು ಕನಿಷ್ಠ ಎರಡು ವರ್ಷಗಳ ಬಳಿಕ ಪಡೆಯಬೇಕು ಎಂಬ ನಿಯಮ ರೂಪಿಸಬೇಕು ಎಂದು ವಿಪಕ್ಷಗಳು ಈ ಹಿಂದಿನಿಂದಲೂ ಒತ್ತಾಯಿಸುತ್ತಿದೆ. ಇದೀಗ ಸುಪ್ರೀಂ ಕೋರ್ಟ್‌ನ ಇತ್ತೀಚಿನ ಹೇಳಿಕೆಯು ಈ ಬೇಡಿಕೆಗೆ ಮತ್ತಷ್ಟೂ ಬಲ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...