ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ: ಅಖಿಲೇಶ್ ಯಾದವ್

Date:

“ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲಾಗುವುದು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಒಂದು ದಿನದ ನಂತರ ಅಖಿಲೇಶ್ ಯಾದವ್ ಈ ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವಾಗ ಸಮಾಜವಾದಿ ಪಕ್ಷವು ಒಂದು ಘಟಕವಾಗಿರುವ ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಅಲ್ಪಾವಧಿಯ ಮಿಲಿಟರಿ ನೇಮಕಾತಿ ಯೋಜನೆ ಅಗ್ನಿವೀರ್‌ ಅನ್ನು ರದ್ದುಗೊಳಿಸುವುದಾಗಿ ಯಾದವ್ ಪದೇ ಪದೇ ಭರವಸೆ ನೀಡಿದ್ದರು. ಈಗ ಮತ್ತೆ ಅದೇ ಭರವಸೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ನಾವು ಅಧಿಕಾರಕ್ಕೆ ಬಂದ ತಕ್ಷಣ, ದೇಶದ ಭದ್ರತೆಗೆ ರಾಜಿ ಮಾಡಿಕೊಳ್ಳುವ ಮತ್ತು ಸೈನಿಕರ ಭವಿಷ್ಯದ ಜೊತೆ ಆಟವಾಡುವ ಅಲ್ಪಾವಧಿಯ ‘ಅಗ್ನಿವೀರ್’ ಸೇನಾ ನೇಮಕಾತಿಯನ್ನು 24 ಗಂಟೆಗಳಲ್ಲಿ ರದ್ದುಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

“ಅಗ್ನಿವೀರ್‌ನಲ್ಲಿ ಇದು ನಮ್ಮ ಬೇಡಿಕೆಯಾಗಿದೆ. ಹಳೆಯ ನೇಮಕಾತಿ (ಮಾದರಿ) ಅನ್ನು ಮರುಸ್ಥಾಪಿಸಬೇಕು” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ನೇಮಕಾತಿಯಲ್ಲಿ ಸೇವೆಯಿಂದ ಹಿಂದಿರುಗಿದ ಅಗ್ನಿವೀರರಿಗೆ ಉತ್ತರ ಪ್ರದೇಶ ಸರ್ಕಾರವು ನೇಮಕಾತಿ ನೀಡಲಿದೆ ಎಂದು ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...