2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಬ್ರಿಜ್ ಭೂಷಣ್ ಸಿಂಗ್

Date:

2024ರ ಲೋಕಸಭಾ ಚುನಾವಣೆಯಲ್ಲಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಆರೋಪಿ ಬ್ರಿಜ್ ಭೂಷಣ್ ಸಿಂಗ್‌, “2024 ಕಾ ಚುನಾವ್ ಕೈಸರ್‌ಗಂಜ್ ಸೆ ಲಡೂಂಗಾ (2024 ರ ಲೋಕಸಭೆ ಚುನಾವಣೆಯಲ್ಲಿ ನಾನು ಕೈಸರ್‌ಗಂಜ್‌ನಿಂದ ಸ್ಪರ್ಧಿಸುತ್ತೇನೆ)” ಎಂದು ಹೇಳಿದ್ದು, ‘ಲಡೂಂಗಾ‘ (ಸ್ಪರ್ಧಿಸುತ್ತೇನೆ) ಪದವನ್ನು ಮೂರು ಬಾರಿ ಉಚ್ಛರಿಸಿದ್ದಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆ ಕುರಿತು ಅವರು, “ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು, “ಜೂನ್‌ 15ರೊಳಗೆ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಎಲ್ಲ ತನಿಖೆಗಳನ್ನು ಪೂರ್ಣಗೊಳಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ” ಎಂದು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರೈತರ ಪ್ರತಿಭಟನೆ ಬೆಂಬಲಿಸುವವರ ಟ್ವಿಟ್ಟರ್ ಖಾತೆ ರದ್ದು ಮಾಡಲು ಕೇಂದ್ರ ಸರ್ಕಾರ ಒತ್ತಡ ಹಾಕಿತ್ತು: ಜಾಕ್ ಡೋರ್ಸಿ

ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂಡೋನೇಷ್ಯಾ, ಬಲ್ಗೇರಿಯಾ, ಕಿರ್ಗಿಸ್ತಾನ್, ಮಂಗೋಲಿಯಾ ಮತ್ತು ಕಝಾಕಿಸ್ತಾನ್‌ನಲ್ಲಿ ನಡೆದ ಪಂದ್ಯಾವಳಿಗಳ ಮೇಲೆ ತಮಗೆ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಆ 5 ರಾಷ್ಟ್ರಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಲ್ಲಿನ ಕುಸ್ತಿ ಫೆಡರೇಷನ್‌ಗಳಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...