ಉತ್ತರ ಪ್ರದೇಶದ ಝಾನ್ಸಿ ಸ್ಥಾನ ನೀಡಿದರೆ 2029ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ: ಉಮಾ ಭಾರತಿ

Date:

ಬಿಜೆಪಿ ಸೂಚಿಸಿದರೆ 2029ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಆದರೆ ಉತ್ತರ ಪ್ರದೇಶದ ಝಾನ್ಸಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಉಮಾ ಭಾರತಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಮತ್ತು ಸಂಸದೀಯ ನಾಯಕತ್ವವನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷ(ಬಿಜೆಪಿ) ಹೇಳಿದರೆ ನಾನು ಖಂಡಿತವಾಗಿಯೂ 2029ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಆದರೆ ಝಾನ್ಸಿ ಲೋಕಸಭೆ ಸ್ಥಾನದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ಲಲಿತಪುರದ ಮಾಧ್ಯಮ ಸ್ನೇಹಿತರಿಗೆ ಹೇಳಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮೊದಲು, ಶನಿವಾರ ಲಲಿತಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಉಮಾ ಭಾರತಿ ಅವರು, ಝಾನ್ಸಿಯಲ್ಲಿರುವ ಬುಂದೇಲ್‌ಖಂಡ್ ತಮ್ಮ ‘ಭಾವನಾತ್ಮಕ ಮನೆ’ ಎಂದು ಹೇಳಿಕೊಂಡಿದ್ದಾರೆ. “ನಾನು ಅಲ್ಲಿನ ಜನರೊಂದಿಗೆ ಆಳವಾದ ಬಾಂಧವ್ಯವನ್ನು ಹೊಂದಿದ್ದೇನೆ. ಪಕ್ಷ ಹೇಳಿದರೆ ನಾನು ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ” ಎಂದಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಝಾನ್ಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಉಮಾ ಭಾರತಿ, ಅದಾದ ಬಳಿಕ ಚುನಾವಣೆ ಟಿಕೆಟ್ ಉಮಾ ಪಾಲಾಗಿಲ್ಲ. ಕಳೆದ(2024) ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರಿರಲಿಲ್ಲ.

“ಉಮಾ ಭಾರತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಬದಲಾಗಿ ಗಂಗಾ ನದಿಯ ಪುನರುಜ್ಜೀವನಕ್ಕಾಗಿ ಕೆಲಸ ಮಾಡಲಿದ್ದಾರೆ. ಆದರೆ ರಾಜಕೀಯದಿಂದ ಅವರು ನಿವೃತ್ತಿ ಪಡೆಯುವುದಿಲ್ಲ” ಎಂದು ಬಿಜೆಪಿ ನಾಯಕರುಗಳು ಹೇಳಿಕೊಂಡಿದ್ದರು.

ಈ ಎಲ್ಲಾ ಬೆಳವಣಿಗೆ ಬಳಿಕ ಈ ವರ್ಷದ ಆಗಸ್ಟ್‌ನಲ್ಲಿ ತಾನು ರಾಜಕೀಯದಿಂದ ದೂರ ಉಳಿದಿಲ್ಲ, ಸೂಕ್ತ ಸಮಯದಲ್ಲಿ ಚುನಾವಣಾ ಕ್ಷೇತ್ರಕ್ಕೆ ಮರಳುವುದಾಗಿ ಉಮಾ ಭಾರತಿ ಹೇಳಿದ್ದಾರೆ.

ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಝಾನ್ಸಿ ಸ್ಥಾನವನ್ನು ಗೆದ್ದಿದೆ. ಈ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿಯ ಅನುರಾಗ್ ಶರ್ಮಾ ಪ್ರತಿನಿಧಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...