ಪ್ರಧಾನಿ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಸಿದ್ದರಾಮಯ್ಯ

Date:

ಪ್ರಧಾನಿ ನರೇಂದ್ರ ಮೋದಿ ಅವರು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಅವರು ಕರ್ನಾಟಕ ಸರ್ಕಾರದ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

“ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಸಚಿವರುಗಳು ಕರ್ನಾಟಕಕ್ಕೆ ಬಂದು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪರೀಕ್ಷಿಸಲಿ. ಸುಳ್ಳಾದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ನಿಜ ಆಗಿದ್ದಲ್ಲಿ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸುತ್ತೀರಾ” ಎಂದು ಪ್ರಧಾನಿಗೆ, ಬಿಜೆಪಿ ನಾಯಕರಿಗೆ ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಪಾಠ ಕಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಗುಡುಗು

“ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸುತ್ತೇವೆ” ಎಂದು ತಿಳಿಸಿದರು.

“ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಶಕ್ತಿ ಯೋಜನೆಯಡಿ 325 ಕೋಟಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಒಂದು ಕೋಟಿ 62 ಸಾವಿರ ಕುಟುಂಬಗಳು 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅನ್ನಭಾಗ್ಯ ಯೋಜನೆಯಡಿ ಒಂದು ಕೋಟಿ 20 ಸಾವಿರ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ತಿಂಗಳು 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ. ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ” ಎಂದು ಗ್ಯಾರಂಟಿ ಯೋಜನೆಗಳನ್ನು ವಿವರಿಸಿದರು.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ನವೆಂಬರ್ 23ರಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

“ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ” ಎಂದು ಪ್ರಶ್ನಿಸಿದರು.

“ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದ್ದರಿಂದ ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ಅನುಮಾನ ಬೇಡ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...