ಕುಮಾರಸ್ವಾಮಿಯನ್ನು ತಮ್ಮ ಕುಟುಂಬದಿಂದ ದೇವೇಗೌಡರು ಬಹಿಷ್ಕರಿಸುವರೇ: ಕಾಂಗ್ರೆಸ್‌ ಪ್ರಶ್ನೆ

Date:

ಮತ್ತೊಮ್ಮೆ ಬಿಜೆಪಿಯೊಂದಿಗೆ ಜೆಡಿಎಸ್ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಅಂತ ದೇವೇಗೌಡರು ಎಂದಿದ್ದರು. ಈಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌ ಮಾಡಿ, “ಈ ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಕುಮಾರಸ್ವಾಮಿಯವರು ಹಾಗೂ ದೇವೇಗೌಡರು ಪಶ್ಚಾತ್ತಾಪದ ಮಾತಾಡಿದ್ದರು. ಹಿಂದೆ ಕುಮಾರಸ್ವಾಮಿಯವರು ದೇವೇಗೌಡರ ಅಭಿಪ್ರಾಯದ ವಿರುದ್ಧ ಹೋಗಿದ್ದರು, ಈಗ ತಮ್ಮ ಶಾಸಕರ ಅಭಿಪ್ರಾಯದ ವಿರುದ್ಧ, ತಮ್ಮ ಕಾರ್ಯಕರ್ತರ ವಿರುದ್ಧ, ಮುಖಂಡರ ವಿರುದ್ಧ, ಅಲ್ಪಸಂಖ್ಯಾತರ ವಿರುದ್ಧ ಹೋಗಿದ್ದಾರೆ. ಈಗ ದೇವೇಗೌಡರು ಬಾಯ್ಕಾಟ್ ಮಾಡದಿರಬಹುದು, ಜೆಡಿಎಸ್ ಪಕ್ಷವನ್ನು ರಾಜ್ಯದ ಜನತೆ ಬಾಯ್ಕಾಟ್ ಮಾಡಲಿದ್ದಾರೆ” ಎಂದು ಕುಟುಕಿದೆ.

“ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬಯಸುತ್ತೇನೆ ಎಂದಿದ್ದರು ದೇವೇಗೌಡರು, ಕೆಲವೇ ತಿಂಗಳ ಹಿಂದೆ ಮೊಮ್ಮಗನೂ ದೇವೇಗೌಡರ ಅದೇ ಆಸೆಯನ್ನು ಬಹಿರಂಗಪಡಿಸಿದ್ದರು. ಆದರೆ ಈಗ ಅಲ್ಪಸಂಖ್ಯಾತರ ಅಭಿಪ್ರಾಯವನ್ನು ಧಿಕ್ಕರಿಸಿ ಕೂಡಿಕೆ ಮಾಡಿಕೊಂಡಿದ್ದಾರೆ” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್‌ ನಡೆ ಇದು ಅಲ್ಪಸಂಖ್ಯಾತರ ಬೆನ್ನಿಗೆ ಚೂರಿ ಹಾಕುವ ನಡೆ ಅಲ್ಲವೇ? ಹಿಂದೆ ಯಡಿಯೂರಪ್ಪನವರು ಜೆಡಿಎಸ್ ನವರು ವಚನ ಭ್ರಷ್ಟರು ಎಂದಿದ್ದು ನಿಜವಲ್ಲವೇ? ಕೇವಲ ವಚನಭ್ರಷ್ಟರು ಮಾತ್ರವಲ್ಲ, ಸಿದ್ಧಾಂತ ಭ್ರಷ್ಟರು ಕೂಡ” ಎಂದು ವಾಗ್ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...