ಹೊಸ ವಿವಿಗಳಿಗೆ ಮೂಲಭೂತ ಸೌಕರ್ಯ ನೀಡುವ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ಎಂ.ಸಿ ಸುಧಾಕರ್

Date:

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ, ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರ, ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ವಿಶ್ವವಿದ್ಯಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಮಾತನಾಡಿದರು.

“2022-23ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೆ ಕಾರ್ಯ ನಿರ್ವಹಿಸಲಿರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಪ್ರಸ್ತಾಪಿತ ನೂತನ ವಿವಿಗಳಿಗೆ ಹಂಚಿಕೆಯಾದ ವಾರ್ಷಿಕ 2 ಕೋಟಿ ರೂ ಆವರ್ತಕ ವೆಚ್ಚದಲ್ಲಿ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ ಸೃಜಿಸಲಾದ ನೂತನ ವಿವಿಗಳಿಗೆ ವೇತನ ಪಾವತಿಗಾಗಿ ತಲಾ ರೂ 1 ಕೋಟಿ ರೂ.ಗಳಂತೆ 7 ಕೋಟಿ ರೂ.ಗಳನ್ನು ಪುನರ್ವಿನಿಯೋಗದ ಮೂಲಕ ಬಿಡುಗಡೆಗೊಳಿಸಿ ಆದೇಶಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತಾಪಿತ ನೂತನ ವಿವಿಗಳಿಗೆ ಮಾತೃ ವಿವಿಗಳಿಂದ ವರ್ಗಾವಣೆ ಮಾಡಿರುವ ಬೋಧಕ-ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 58 ರನ್ವಯ ಕ್ರಮ ವಹಿಸುವ ಕುರಿತು ಅವಕಾಶವನ್ನು ಕಲ್ಪಿಸಲಾಗಿದ್ದು, ಅದರನ್ವಯ ಸರ್ಕಾರದ ಹಂತದಲ್ಲಿ ನೂತನ ವಿವಿಗಳಿಗೆ ಪ್ರಸ್ತಾಪಿತ ಬೋಧಕ-ಬೋಧಕೇತರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಲು ಕ್ರಮ ವಹಿಸಲಾಗಿದೆ” ಎಂದು ಸಚಿವ ಎ ಸಿ ಸುಧಾಕರ್ ತಿಳಿಸಿದರು.

ಈ ಹೊಸ ವಿವಿಗಳ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ನಿಲುವು ಪ್ರಕಟಿಸಲಾಗುವುದು. ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಮಾದರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಅಲ್ಲಿನ ಸಮುದಾಯಕ್ಕೆ ಸವಕಾಶವನ್ನು ಸ್ಥಳೀಯವಾಗಿ ಕಲ್ಪಿಸಿ, ಯುವ ಜನಾಂಗವನ್ನು ದೇಶದ ಫಲಪ್ರದವಾಗಿ ಬೆಳೆಸಲು ಸಹಯೋಗ ನೀಡುವ ನಿಟ್ಟಿನಲ್ಲಿ ಈ ಹೊಸ ವಿವಿಗಳನ್ನು ಸ್ಥಾಪಿಸಲಾಗಿದೆ.

“ಸ್ಥಾಪಿತವಾಗಿರುವ ವಿವಿಗಳಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯು ಹಳೆಯ ವಿವಿಗಳ ರೀತಿಯಲ್ಲಿ ಇಲ್ಲದೇ ಇರುವುದು, ಸ್ವಂತ ಕಟ್ಟಡ ಇಲ್ಲದೇ ಇರುವುದು ಹಾಗೂ ಖಾಯಂ ಸ್ವರೂಪದ ಬೋಧಕ-ಬೋಧಕೇತರ ಸಿಬ್ಬಂದಿ, ಆರ್ಥಿಕ ಮುಗ್ಗಟ್ಟು ಮತ್ತು ಸರ್ಕಾರದ ಅನುದಾನ ಇಲ್ಲದೇ ಇರುವುದು ಮುಂತಾದ ಹಲವಾರು ಸಮಸ್ಯೆಗಳಿಂದ ನೂತನ ವಿವಿಗಳು ಸೊರಗಿವೆ, ಹಲವು ವಿವಿಗಳು ಸ್ನಾತಕೋತ್ತರ ಕೇಂದ್ರಗಳ ಸ್ವರೂಪದಲ್ಲೇ ಕಾರ್ಯನಿರ್ವಹಿಸುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಜನರ ಬೇಡಿಕೆ ಮತ್ತು ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಪ್ರಾದೇಶಿಕ ಅಸಮತೋಲನವನ್ನು ನಿರ್ಮೂಲನೆ ಮಾಡುವ ಮತ್ತು ಜಿಲ್ಲೆಗಳ ಉನ್ನತ ಶಿಕ್ಷಣದ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ತೆರೆದಿರುವ ಜಿಲ್ಲಾಮಟ್ಟದಲ್ಲಿರುವ ವಿವಿಗಳು ಇನ್ನೂ ಟೇಕಾಫ್ ಆಗಿಲ್ಲ” ಎಂಬ ವಿಷಯದ ಕುರಿತಂತೆ ಸದಸ್ಯರಾದ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರಿಗೆ ಪೂರಕವಾಗಿ ಸದಸ್ಯರಾದ ತಳವಾರ ಸಾಬಣ್ಣ, ರವಿಕುಮಾರ್, ಹನುಮಂತ ನಿರಾಣಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...