ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?

Date:

2024ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ರೇವರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ರಕ್ಷಾ ಖಡ್ಸೆ ಅವರು ಗೆಲುವು ಕಂಡಿದ್ದಾರೆ. ಜೂನ್ 9ರಂದು ಸಾಯಂಕಾಲ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಮತ್ತು ಸುಮಾರು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಸದ್ಯ ರಕ್ಷಾ ಖಡ್ಸೆ ಅವರಿಗೆ ಕ್ಯಾಬಿನೆಟ್ ಸ್ಥಾನ ಸಿಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಯಾರಿದು ರಕ್ಷಾ ಖಡ್ಸೆ?

ರಕ್ಷಾ ನಿಖಿಲ್ ಖಡ್ಸೆ ಮಹಾರಾಷ್ಟ್ರದ ರಾಜಕಾರಣಿ. ಅವರು ಸಂಸತ್ತಿನಲ್ಲಿ ರೇವರ್ ಲೋಕಸಭಾ ಸ್ಥಾನವನ್ನು ಪ್ರತಿನಿಧಿಸುತ್ತಾರೆ. ರಕ್ಷಾ ಖಡ್ಸೆ ಮಹಾರಾಷ್ಟ್ರದ ಹಿರಿಯ ಎನ್‌ಸಿಪಿ ನಾಯಕ ಏಕನಾಥ್ ಖಡ್ಸೆ ಅವರ ಸೊಸೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಕೆಯ ಪತಿ ನಿಖಿಲ್ ಖಡ್ಸೆ ಅವರು 2013ರಲ್ಲಿ ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತದೆ.

ರಕ್ಷಾ ಖಡ್ಸೆ ಅವರು 2010ರಲ್ಲಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಖಡ್ಸೆ ಕೊತಾಡಿ ಗ್ರಾಮದ ಸರಪಂಚರಾಗಿ ಆಯ್ಕೆಯಾದರು. ನಂತರ ಅವರು ಜಲಗಾಂವ್ ಜಿಲ್ಲಾ ಪರಿಷತ್ತಿಗೆ ಆಯ್ಕೆಯಾದರು. 2014ರ ಲೋಕಸಭಾ ಚುನಾವಣೆಯಲ್ಲಿ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮನೀಶ್ ಜೈನ್ ಅವರನ್ನು 3,18,608 ಮತಗಳ ಅಂತರದಿಂದ ಸೋಲಿಸಿದರು. ಅವರು 6,05,452 ಪಡೆದಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಉಲ್ಲಾಸ ಪಾಟೀಲ್ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದರು. ಇದೀಗ, 2024ರ ಲೋಕಸಭಾ ಚುನಾವಣೆಯಲ್ಲಿಯೂ ಶ್ರೀರಾಮ ಪಾಟೀಲ್ ವಿರುದ್ಧ ಸ್ಪರ್ಧೆ ಮಾಡಿ 2,72,183 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಚಿವ ಸ್ಥಾನ

ರಕ್ಷಾ ಖಡ್ಸೆ ರೇವರ್‌ ಕ್ಷೇತ್ರದಿಂದ ಗೆದ್ದು ಮೂರು ಬಾರಿ ಸಂಸದರಾಗಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಅವರು ಅತ್ಯಂತ ಕಿರಿಯ ಸಂಸದರಾದರು. ಖಡ್ಸೆ ಅವರು ಮಹಿಳಾ ಸಬಲೀಕರಣ, ಮಕ್ಕಳ ಶಿಕ್ಷಣ ಮತ್ತು ರೈತರ ಕಲ್ಯಾಣದ ಬಗ್ಗೆ ಉತ್ಸುಕರಾಗಿದ್ದಾರೆ.

ಖಡ್ಸೆ ಅವರ ಮಾವ ಏಕನಾಥ್ ಖಡ್ಸೆ ಅವರು ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರ ವಿಧಾನಸಭೆಯ ಮಾಜಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...