ಚುನಾವಣಾ ಬಾಂಡ್ | ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡುತ್ತಾರಾ: ಸಿಎಂ ಪ್ರಶ್ನೆ

Date:

“ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡುತ್ತಾರಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು.

ಸಿಎಂ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಮೊದಲು ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜೀನಾಮೆ ನೀಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್‌ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ಇನ್ನು ಇದೇ ಸಂದರ್ಭದಲ್ಲಿ, “ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ತಮಿಳುನಾಡಿಗೆ ಈಗಾಗಲೇ 202 ಟಿ.ಎಂ.ಸಿ ನೀರು ಬಿಡಲಾಗಿದೆ. ಕರ್ನಾಟಕ ನಿಯಮಾನುಸಾರ ಬಿಡುವ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣವನ್ನು ತಮಿಳುನಾಡಿಗೆ ಹರಿಸಿದೆ” ಎಂದರು.

ಚುನಾವಣಾ ಬಾಂಡ್‌ಗಳ ಮೂಲಕ ಬೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ಯ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಅಪರಾಧಕ್ಕಾಗಿ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆಗೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...