ಇದು ಯುಪಿ ಅಲ್ಲ – ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ; ಕೆಲಸಕ್ಕೆ ಮರಳುವಂತೆ ವೈದ್ಯರಲ್ಲಿ ಮಮತಾ ಮನವಿ

Date:

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಆಸ್ಪತ್ರೆಯ ವೈದ್ಯರು ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ನೀಡಿದ್ದು, ಪ್ರತಿಭಟನಾನಿರತ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. “ಪ್ರಕರಣಕ್ಕೆ ತಮ್ಮ ‘ಕುರ್ಚಿ’ ಬಿಡುವುಡು ನ್ಯಾಯವಲ್ಲ. ತಮ್ಮ ಕುರ್ಚಿಯನ್ನು ಬಿಡಲೇಬೇಕು ಎಂದಿದ್ದರೆ, ರಾಜೀನಾಮೆ ನೀಡಲು ಸಿದ್ದನಿದ್ದೇನೆ” ಎಂದು ಹೇಳಿದ್ದಾರೆ.

ಪ್ರತಿಭಟನಾನಿರತ ವೈದ್ಯರೊಂದಿಗೆ ಗುರುವಾರ ಸಭೆ ನಡೆಸಲು ಮಮತಾ ಬ್ಯಾನರ್ಜಿ ಮುಂದಾಗಿದ್ದರು. ಆದರೆ, ಮಾತುಕತೆಗೆ ವೈದ್ಯರು ನಿರಾಕರಿಸಿದ್ದರು. ಇದರಿಂದಾಗಿ, ರಾಜ್ಯ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಬಿಕ್ಕಟ್ಟು ಹದಗೆಟ್ಟಿದೆ.

ಇಂತಹ ಪರಿಸ್ಥಿತಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಮಮತಾ ಭೇಟಿ ನೀಡಿದ್ದಾರೆ. ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, “ಇಲ್ಲಿಗೆ ಬಂದಿರುವುದು ನಿಮ್ಮ ‘ದೀದಿ’ಯೇ ಹೊರತು. ಮುಖ್ಯಮಂತ್ರಿ ಅಲ್ಲ. ಸಮಸ್ಯೆಗಳನ್ನು ಪರಿಹರಿಸಲು ಸ್ವಲ್ಪ ಸಮಯಬೇಕು. ಎಲ್ಲವನ್ನು ನಿಭಾಯಿಸಲು ಕಾಲಾವಕಾಶ ಕೊಡಿ. ಕೆಲಸಕ್ಕೆ ಮರಳಿ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನಿನ್ನನ್ನು ಒತ್ತಾಯಿಸಲು ಸಾಧ್ಯವಿಲ್ಲ. ನಾನು ನಿಮ್ಮಲ್ಲಿ ಮನವಿಯನ್ನು ಮಾತ್ರ ಮಾಡಬಹುದು. ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಇದು ಉತ್ತರ ಪ್ರದೇಶವಲ್ಲ. ನಾವು ನಿಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ಸಿಪಿಎಂ ಅಧಿಕಾರದಲ್ಲಿದ್ದಾಗ ನಾನೂ ಕೂಡ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದೆ. ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಯಾವುದೇ ಅನ್ಯಾಯವಾಗುವುದಿಲ್ಲ. ನ್ಯಾಯ ದೊರೆಯುತ್ತದೆ. ನಾನು ಭರವಸೆ ನೀಡುತ್ತಿದ್ದೇನೆ” ಎಂದು ಮಮತಾ ಹೇಳಿದ್ದಾರೆ.

“ನಾನು ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇನೆ. ಅವುಗಳ ಈಡೇರಿಕೆಗೆ ಪ್ರಯತ್ನಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...