50% ಮಿತಿಯನ್ನು ತೆಗೆಯುತ್ತೇವೆ, ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ: ರಾಹುಲ್ ಗಾಂಧಿ

Date:

ಜಾತಿ ಆಧಾರಿತ ಮೀಸಲಾತಿಗೆ ಇರುವ ಶೇ.50 ರಷ್ಟು ಮಿತಿಯನ್ನು ಕಾಂಗ್ರೆಸ್‌ ತೆಗೆದುಹಾಕುತ್ತದೆ. ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಅಗತ್ಯವಿರುವಷ್ಟ ಮೀಸಲಾತಿ ಕೋಟಾವನ್ನು ಹೆಚ್ಚಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು. “ಈ ಚುನಾವಣೆಯು ಸಂವಿಧಾನದ ಉಳಿವಿಗಾಗಿನ ಹೋರಾಟವಾಗಿದೆ. ಸಂವಿಧಾನವನ್ನು ಬದಲಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸಿವೆ. ಕಾಂಗ್ರೆಸ್‌ ಮತ್ತು ‘ಇಂಡಿಯಾ’ ಮೈತ್ರಿಕೂಟವು ಸಂವಿಧಾನವನ್ನು ಉಳಿಸಲು ಹೋರಾಡುತ್ತಿವೆ. ನಮ್ಮ ಸಂವಿಧಾನವು ದೇಶದ ಜನರಿಗೆ ನೀರು, ಅರಣ್ಯ, ಭೂಮಿ ಮೇಲೆ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳನ್ನು ತೆಗೆದು ಹಾಕಲು ಮತ್ತು ಸಂಪೂರ್ಣ ಅಧಿಕಾರಕ್ಕಾಗಿ ನರೇಂದ್ರ ಮೋದಿ ಬಯಸುತ್ತಾರೆ” ಎಂದು ಆರೋಪಿಸಿದ್ದಾರೆ.

“ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಘೋಷಿಸಿದ್ದರು. ಅದಕ್ಕಾಗಿಯೇ ಅವರು ‘400 ಸೀಟು’ ಘೋಷಣೆ ಮಾಡಿದರು. ಆದರೆ, 400 ಸ್ಥಾನವನ್ನು ಮರೆತುಬಿಡಿ, ಅವರಿಗೆ 150 ಸೀಟುಗಳು ಸಿಗುತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

” ಅವರು ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳುತ್ತಾರೆ. ನಾನು ಈಗಲೇ ಭರವಸೆ ನೀಡುತ್ತಿದ್ದೇನೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೀಸಲಾತಿಯ 50% ಮಿತಿಯನ್ನು ತೆಗೆದು, ಮೀಸಲಾತಿಯ್ನು ಹೆಚ್ಚಿಸುತ್ತೇವೆ. ಬಡವರು, ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ,’’ ಎಂದು ರಾಹುಲ್ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ, ‘ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತದೆ’ ಎಂದು ಆರೋಪಿಸುತ್ತಿದೆ. ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಆದಿವಾಸಿಗಳ ಮೇಲಿನ ದೌರ್ಜನ್ಯಗಳ ಬಗ್ಗೆ ಮಾಧ್ಯಮಗಳು ಸುದ್ದಿ ಮಾಡದೇ ಇರುವ ಬಗ್ಗೆ ಮಾತನಾಡಿದ ರಾಹುಲ್, “ನಿಮ್ಮ (ಆದಿವಾಸಿಗಳು) ಮಕ್ಕಳ ಮೇಲೆ ಅತ್ಯಾಚಾರ ಎಸಗಲಾಗಿದೆ. ನಿಮ್ಮ ಭೂಮಿ ಕಿತ್ತುಕೊಳ್ಳಲಾಗಿದೆ. ಆದರೆ ಮಾಧ್ಯಮಗಳು ವರದಿ ಮಾಡುವುದಿಲ್ಲ. ಯಾಕೆಂದರೆ, ಈ ಮಾಧ್ಯಮ ಸಂಸ್ಥೆಗಳಲ್ಲಿ ಆದಿವಾಸಿಗಳಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...