ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ : ಡಿ ಕೆ ಶಿವಕುಮಾರ್

Date:

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸುದ್ದಿಯಾಗಿದ್ದ ಕಮಿಷನ್ ದಂಧೆ ಆರೋಪ ರಾಜ್ಯ ರಾಜಕಾರಣದಲ್ಲಿ ಮತ್ತೆ ಸುದ್ದಿ ಮಾಡುತ್ತಿದೆ. ಈ ನಡುವೆ ಇಂದು ಮತ್ತೆ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ನಾನು ಏನಾದರೂ ಕಮಿಷನ್ ಕೇಳಿದ್ದರೆ ಇವತ್ತೇ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ. ಗುತ್ತಿಗೆದಾರರು ಯಾರಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಚರ್ಚೆ ಮಾಡಲು ಹೋಗಲ್ಲ. 10ರಿಂದ 15 ಪರ್ಸೆಂಟ್ ಕಮಿಷನ್ ಕೇಳಿದ್ರು ಅಂತ ಆರೋಪ ಮಾಡ್ತಿದ್ದಾರೆ. ಯಾರು ಕೇಳಿದ್ರು ಎಂಬ ಮಾಹಿತಿಯನ್ನೂ ಕೂಡ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ನಾನು ಕಮಿಷನ್ ಕೇಳಿದ್ದರೆ ಇವತ್ತೇ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ. ಪಡೆದುಕೊಳ್ಳದೇ ಇದ್ದರೆ ಮಾಜಿ ಸಿಎಂ ಬಸವರಾಜ ರಾಜೀನಾಮೆ ಕೊಡುತ್ತಾರಾ? ಆರ್ ಅಶೋಕ್ ರಾಜೀನಾಮೆ ಕೊಡ್ತಾರಾ? ಎಂದು ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...