ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

Date:

“ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ” ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ. ನಾನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಅಧ್ಯಕ್ಷ ಸ್ಥಾನ ಸಿಕ್ಕರೆ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದರು.

“ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾಗಿದೆ. ಐದು ವರ್ಷ ಪೂರ್ಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಇರುತ್ತಾರೆ ಅಂತ ವೇಣುಗೋಪಾಲ್ ಹೇಳಿದ್ದರು. ಆದರೆ ಚುನಾವಣೆ ಫಲಿತಾಂಶ ಬರಲಿ. ಬದಲಾವಣೆ ಆದರೂ ಆಗಬಹುದು. ಇಲ್ಲಿ ಮಾತ್ರವಲ್ಲ ಎಲ್ಲ ಕಡೆಯೂ ಆಗಬಹುದು” ಎಂದು ಕೆ ಎನ್ ರಾಜಣ್ಣ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ದೇವರಾಜೇಗೌಡ, ಡಿಕೆ ಶಿವಕುಮಾರ್​ ಆಡಿಯೋ ವಿಚಾರವಾಗಿ ಮಾತನಾಡಿದ ಅವರು, “ಕರೆ ಮಾಡಿದರೆ ಮಾತನಾಡೋಕೆ ಆಗಲ್ಲವೆಂದು ಹೇಳಲು ಆಗುತ್ತಾ? ನಮ್ಮನ್ನು ಸಿಲುಕಿಸಲು ಪ್ರಯತ್ನ ಮಾಡುತ್ತಾರೆ. ಹೆಣ್ಣುಮಕ್ಕಳು ಕರೆ ​ಮಾಡಿದರೆ ನಾನೇ ಬ್ಲಾಕ್ ಮಾಡುತ್ತೇನೆ. ಯಾಕೆ ಬೇಕಪ್ಪ ಅಂತ ನಂಬರ್​ ಬ್ಲಾಕ್ ಮಾಡುತ್ತೇನೆ. ನಾನು ಮೊಬೈಲ್ ಎಕ್ಸ್​ಪರ್ಟ್​ ಅಲ್ಲ, ನನಗೆ ಫೋನ್​ ಮಾಡುವುದು ಅಷ್ಟೇ ಗೊತ್ತು” ಎಂದು ಕೆ ಎನ್ ರಾಜಣ್ಣ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...