ಡಿಕೆಶಿ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ವಾದ ಮಂಡಿಸಲು ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್‌

Date:

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಶುಕ್ರವಾರ(ಡಿ.15) ಹೈಕೋರ್ಟ್‌ನಲ್ಲಿ ನಡೆಯಿತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಅರ್ಜಿಯ ಊರ್ಜಿತತ್ವದ ಬಗ್ಗೆ ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅರ್ಜಿ ವಿಚಾರಣೆಯ ಆರಂಭದಲ್ಲಿ ಪೀಠವು ಅರ್ಜಿದಾರರು ಹೇಗೆ ಇದರಿಂದ ಬಾಧಿತರು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ, “ವೈಯಕ್ತಿಕವಾಗಿ ಬಾಧಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್‌ ಕಾನೂನಿಗೆ ಚಾಲನೆ ನೀಡಬಹುದು” ಎಂದರು. ಇದಕ್ಕೆ ಪೀಠವು ಸಹಮತಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಿಮವಾಗಿ ಪೀಠವು, “ದಳವಾಯಿ ಅವರು ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್‌ ಜನರಲ್‌ ಅವರು ಸಮಯ ಕೋರಿದ್ದಾರೆ. ಹೀಗಾಗಿ, 2024ರ ಜನವರಿ 5ರಂದು ಎಜಿ ಅವರು ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಿಸ್ತೃತವಾಗಿ ಉತ್ತರಿಸಬೇಕು” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ಏನಿದು ಪ್ರಕರಣ?

2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ನಡುವೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್‌ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್‌ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದನ್ನು ಆಕ್ಷೇಪಿಸಿ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...