ದೆಹಲಿಗೆ ಮಹಿಳಾ ಮುಖ್ಯಮಂತ್ರಿ? ರೇಖಾ ಗುಪ್ತಾ ಆಯ್ಕೆ ಸಾಧ್ಯತೆ!

Date:

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಗದ್ದುತೆಯ್ನು ತನ್ನ ವಶಕ್ಕೆ ಪಡೆದಿದೆ. ದೆಹಲಿಯಲ್ಲಿ ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಎಂಬ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಜಾತಿ, ಲಿಂಗ ಸಮೀಕರಣದೊಂದಿಗೆ ಮುಖ್ಯಮಂತ್ರಿ ನೇಮಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರ ಹೆಸರು ಮುನ್ನೆಲೆಯಲ್ಲಿದೆ.

ವಿದ್ಯಾರ್ಥಿಯಾಗಿದ್ದಾಗಲೇ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದ ರೇಖಾ ಗುಪ್ತ ಅವರು ವೈಶ್ಯ ಸಮುದಾಯಕ್ಕೆ ಸೇರಿದವರು. ಅವರು ಸ್ನಾತಕೋತ್ತರ ಪದವಿ ಪಡೆಯುವಾಗ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯೂ ಆಗಿದ್ದರು. ಅಲ್ಲದೆ, 2022ರಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಾಗ, ರೇಖಾ ಗುಪ್ತಾ ಅವರನ್ನು ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ, ಎಎಪಿ ಬಹುಮತ ಪಡೆದು, ಆಡಳಿತ ರಚಿಸಿದ್ದರಿಂದ, ರೇಖಾ ಗುಪ್ತಾ ಅವರಿಗೆ ಮೇಯರ್ ಹುದ್ದೆ ಕೈತಪ್ಪಿತ್ತು.

ಜಾತಿ ಆಧಾರಿತವಾಗಿ ನೋಡದರೂ, ಲಿಂಗ ಆಧಾರತವಾಗಿ ನೋಡಿದರೂ ರೇಖಾ ಗುಪ್ತ ಅವರಿಗೆ ಅವಕಾಶ ದೊರೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ, ಮುಖ್ಯಮಂತ್ರಿ ಹುದ್ದೆ ತಪ್ಪಿದರೂ, ಉಪಮುಖ್ಯಮಂತ್ರಿ ಹುದ್ದೆಯಾದರೂ ದೊರೆಯುವ ಸಾಧ್ಯತೆಗಳಿವೆ ಎಂಬುದು ದೆಹಲಿಯಲ್ಲಿನ ಚರ್ಚೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಜಾಟ್‌ (ಎಸ್‌ಸಿ) ಸಮುದಾಯಕ್ಕೆ ಸೇರಿದ ರಾಜ್‌ ಕುಮಾರ್ ಚೌಹಾಣ್‌ ಅವರ ಹೆಸರು ಕೂಡ ಮುನ್ನೆಲೆಯಲ್ಲಿದೆ. ಸದ್ಯ, ದೆಹಲಿ, ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಜಾಟ್‌ ಸಮುದಾಯದ ಪ್ರಾಬಲ್ಯ ಹೆಚ್ಚಿರುವ ಕಾರಣ, ಚೌಹಾಣ್ ಅವರನ್ನು ದೆಹಲಿ ಮುಖ್ಯಮಂತ್ರಿ ಮಾಡುವುದು, ಪಕ್ಕದ ರಾಜ್ಯಗಳಲ್ಲಿಯೂ ಬಿಜೆಪಿಗೆ ಹೆಚ್ಚು ನೆರವಾಗುತ್ತದೆ ಎಂದೂ ಹೇಳಲಾಗುತ್ತಿದೆ.

ಸದ್ಯ, ಬಿಜೆಪಿ ನಾಯಕರು ಮುಖ್ಯಮಂತ್ರಿ ಆಯ್ಕೆಗಾಗಿ ಚರ್ಚೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ವಿದೇಶಿ ಪ್ರವಾಸದಲ್ಲಿದ್ದು, ಅವರು ಭಾರತಕ್ಕೆ ಮರಳಿದ ಬಳಿಕ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಾಧ್ಯತೆಗಳಿವೆ. ಆ ವೇಳೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್‌ ಫೈನಲ್‌ ಮಾಡಲಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...